
ಮದುವೆಯಾಗಲು ಹುಡುಗಿ ಸಿಗಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.
26 ವರ್ಷದ ಬಿ.ಮಧುಸೂದನ್ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಗುಡೇಕೋಟೆ ಗ್ರಾಮದ ನಿವಾಸಿ.
ಯುವಕ ಮಧುಸೂಧನ್ ಇಷ್ಟಪಟಿದ್ದ ಯುವತಿಯನ್ನು ಮದುವೆ ಮಾಡಿಕೊಡಲು ಆಕೆಯ ತಂದೆ ಒಪ್ಪಿರಲಿಲ್ಲ. ಯಾರೂ ಕನ್ಯೆ ಕೊಡುತ್ತಿರಲಿಲ್ಲ. ಇದರಿಂದ ತನಗೆ ಮದುವೆಯಾಗಲು ಯಾರೂ ಕನ್ಯೆ ಕೊಡಲ್ಲ ಎಂದು ಮನನೊಂದ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ.
ತಕ್ಷಣ ಆತನನ್ನು ಬಳ್ಲಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಯುವಕ ಕೊನೆಯುಸಿರೆಳೆದಿದ್ದಾನೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ