Karnataka News

*ಪೊಲೀಸ್ ವಿಚಾರಣೆಗೆ ಭಯಗೊಂಡು ಆತ್ಮಹತ್ಯೆಗೆ ಶರಣಾದ ಯುವಕ*

ಪ್ರಗತಿವಾಹಿನಿ ಸುದ್ದಿ: ಪೊಲೀಸ್ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರದ ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.

ಮೌನೇಶ್ ಅಬ್ಬಿಹಾಳ (30) ಮೃತ ದುರ್ದೈವಿ. ಕಳೆದ ಕೆಲ ದಿನಗಳ ಹಿಂದೆ ಮೃತನ ಸೋದರ ಮಾವ ಬಸವರಾಜ್ ಕಾಣೆಯಾಗಿದ್ದ. ಈ ಸಂಬಂಧ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಮೌನೇಶ್ ನನ್ನು ಠಾಣೆಗೆ ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದರು.

ಗುರುವಾರ ಮತ್ತೆ ವಿಚಾರಣೆಗೆ ಬರುವಂತೆ ಪೊಲೀಸರು ಹೇಳಿದ್ದರು. ಆದರೆ ವಿಚರಣೆಗೆ ಹೆದರಿದ ಯುವಕ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾನೆ. ಯುವಕನ ಆತ್ಮಹತ್ಯೆ ಹಲವು ಅನುಮಾನಕ್ಕೆ ಕಾರಣವಾಗಿದೆ.

Related Articles

Back to top button