*ಪೊಲೀಸ್ ವಿಚಾರಣೆಗೆ ಭಯಗೊಂಡು ಆತ್ಮಹತ್ಯೆಗೆ ಶರಣಾದ ಯುವಕ*

ಪ್ರಗತಿವಾಹಿನಿ ಸುದ್ದಿ: ಪೊಲೀಸ್ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರದ ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ. ಮೌನೇಶ್ ಅಬ್ಬಿಹಾಳ (30) ಮೃತ ದುರ್ದೈವಿ. ಕಳೆದ ಕೆಲ ದಿನಗಳ ಹಿಂದೆ ಮೃತನ ಸೋದರ ಮಾವ ಬಸವರಾಜ್ ಕಾಣೆಯಾಗಿದ್ದ. ಈ ಸಂಬಂಧ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಮೌನೇಶ್ ನನ್ನು ಠಾಣೆಗೆ ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದರು. ಗುರುವಾರ ಮತ್ತೆ ವಿಚಾರಣೆಗೆ ಬರುವಂತೆ ಪೊಲೀಸರು ಹೇಳಿದ್ದರು. ಆದರೆ ವಿಚರಣೆಗೆ ಹೆದರಿದ ಯುವಕ … Continue reading *ಪೊಲೀಸ್ ವಿಚಾರಣೆಗೆ ಭಯಗೊಂಡು ಆತ್ಮಹತ್ಯೆಗೆ ಶರಣಾದ ಯುವಕ*