Karnataka NewsLatest

*ವಾಟ್ಸಪ್ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾದ ಎಂಜಿನಿಯರ್*

ಪ್ರಗತಿವಾಹಿನಿ ಸುದ್ದಿ: ನೀರಿನ ಟ್ಯಾಂಕ್ ಗೆ ನೇಣುಬಿಗಿದುಕೊಂಡು ಎಂಜಿನಿಯರ್ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕುರುಬರದೊಡ್ಡಿಯಲ್ಲಿ ನಡೆದಿದೆ.

30 ವರ್ಷದ ಜ್ಞಾನೇಶ್ ಮೃತ ಎಂಜಿನಿಯರ್. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹೆಮ್ಮತ್ತಿ ಗ್ರಾಮದ ನಿವಾಸಿ. ಕಳೆದ ಕೆಲ ವರ್ಷಗಳಿಂದ ಕೊತ್ತೂರು ಗ್ರಾಮದಲ್ಲಿ ವಾಸವಾಗಿದ್ದ. ಶಿಂಷಾ ಏತನೀರಾವರಿ ಯೋಜನೆಯಲ್ಲಿ ಕಳೆದ 5 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕರ್ಯವ್ಯ ನಿರ್ವಹಿಸುತ್ತಿದ್ದ.

ಆತ್ಮಹತ್ಯೆಗೂ ಮುನ್ನ ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ‘Work Pressure” ಎಂದು ಬರೆದಿತ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೆಲಸದ ಒತ್ತಡದಿಂದ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button