ಹುಬ್ಬಳ್ಳಿಯಲ್ಲಿ ಯುವತಿ ಕೊಲೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ದಿಗ್ಭ್ರಮೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹುಬ್ಬಳ್ಳಿಯ ವೀರಾಪುರ ಓಣಿಯ ಯುವತಿ ಕೊಲೆ ಪ್ರಕರಣದ ಕುರಿತು ದಿಗ್ಭ್ರಮೆ ವ್ಯಕ್ತಪಡಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಆರೋಪಿಯ ಬಂಧನ ಸೇರಿದಂತೆ ತುರ್ತು ಕ್ರಮಕ್ಕೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ನೇಹಾ ಹಿರೇಮಠ ಕೊಲೆ ಪ್ರಕರಣ ಮರೆಯುವ ಮುನ್ನವೇ ಮತ್ತೊಂದು ಹೇಯ ಕೃತ್ಯ ನಡೆದಿದೆ. ಇದೊಂದು ಅತ್ಯಂತ ದುರದೃಷ್ಟಕರ ಘಟನೆ. ಪ್ರೀತಿ, ಪ್ರೇಮದ ಹೆಸರಿನಲ್ಲಿ ಯುವ ಜನಾಂಗ ಇಂತಹ ದುಷ್ಕೃತ್ಯಕ್ಕಿಳಿಯುತ್ತಿರುವುದು ತೀವ್ರ ನೋವುಂಟು ಮಾಡಿದೆ. ಈ ಪ್ರಕರಣದ ಸುದ್ದಿ ತಿಳಿದ ತಕ್ಷಣ ಹಿರಿಯ ಅಧಿಕಾರಿಗಳ ಜೊತೆಗೆ ಮಾತನಾಡಿ, ಘಟನೆ ಕುರಿತು ತುರ್ತು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದೇನೆ. ಆರೋಪಿಯ ಬಂಧನದ ಜೊತೆಗೆ, ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಲಾಗುವುದು. ಯುವತಿಯ ಕುಟುಂಬದ ದುಃಖದಲ್ಲಿ ನಾನು ಕೂಡ ಭಾಗಿಯಾಗಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ