
ಪ್ರಗತಿವಾಹಿನಿ ಸುದ್ದಿ: ಯುವತಿಯ ಭಾವಿ ಗಂಡನ ಎದುರೇ ಯುವತಿಯನ್ನು 8 ಮಂದಿ ದುಷ್ಕರ್ಮಿಗಳ ತಂಡ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಕಾಸ್ಲಂಜ್ ನಲ್ಲಿ ವರದಿಯಾಗಿದೆ.
ಏಪ್ರಿಲ್ 10 ರಂದು ಮಧ್ಯಾಹ್ನ 2:30 ರ ಸುಮಾರಿಗೆ ಯವಕ ಮತ್ತು ಯುವತಿ ಇಬ್ಬರು ರಸ್ತೆ ಬದಿಯ ಕಾಲುವೆಯ ಬಳಿ ಕುಳಿತಿದ್ದಾಗ ಅವರನ್ನು ನೋಡಿದ ದುಷ್ಕರ್ಮಿಗಳ ಗುಂಪು ಅವರನ್ನ ಸಮೀಪಿಸಿ ಆ ವ್ಯಕ್ತಿಯಿಂದ ಹಣ ತೆಗೆದುಕೊಂಡು ಹೋಗಿದ್ದು. ಪುರುಷರು ತನ್ನನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಒಬ್ಬೊಬ್ಬರಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಹೇಳಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು. ತ್ವರಿತ ನ್ಯಾಯಕ್ಕಾಗಿ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.