Kannada NewsLife StyleNational

*ಮದುವೆ ಒತ್ತಡದಿಂದ ತಪ್ಪಿಸಿಕೊಳ್ಳಲು ತಲೆ ಬೋಳಿಸಿಕೊಂಡ ಯುವತಿ*

ಪ್ರಗತಿವಾಹಿನಿ ಸುದ್ದಿ: ಯುವತಿಯೊಬ್ಬಳು ಮದುವೆ ಒತ್ತಡದಿಂದ ತಪ್ಪಿಸಿಕೊಳ್ಳಲು ತಲೆ ಬೋಳಿಸಿಕೊಂಡಿರುವ ವಿಡಿಯೋ ವೈರಲ್ ಆಗಿದೆ.

@kajals_move_ ಎಂಬುವವರು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಈ ಕ್ಲಿಪ್ ಅನ್ನು ಈಗಾಗಲೇ ಸುಮಾರು 3.7 ಲಕ್ಷ ಮಂದಿ ವೀಕ್ಷಿಸಿದ್ದಾರೆ.

ವೈಯಕ್ತಿಕ ಸ್ವಾತಂತ್ರ್ಯ ಮತ್ತು ಹೆಣ್ಣುಮಕ್ಕಳ ಮೇಲೆ ಇರಿಸಲಾಗಿರುವ ಸಾಮಾಜಿಕ ನಿರೀಕ್ಷೆಗಳ ಬಗ್ಗೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಅನೇಕ ನೆಟ್ಟಿಗರು ಅವರ ಜೀವನದ ಮೇಲೆ ಹಿಡಿತ ಸಾಧಿಸುವ ನಿರ್ಧಾರವನ್ನು ಶ್ಲಾಘಿಸಿದ್ದಾರೆ.

ತನಗೆ ಕೂದಲೆಂದರೆ ತುಂಬಾ ಇಷ್ಟ ನನಗೆ ಕೂದಲು ಕತ್ತರಿಸಿಕೊಳ್ಳಲು ಇಷ್ಟವಿರಲಿಲ್ಲ, ಆದರೆ ಮನೆಯಲ್ಲಿ ಮದುವೆಯಾಗು ಎಂದು ಒತ್ತಡ ಹೇರುತ್ತಿದ್ದರು ಹೀಗಾಗಿ ಕೂದಲು ಕತ್ತರಿಸಿಕೊಂಡಿದ್ದೇನೆ ಎಂದು ಯುವತಿ ಹೇಳಿದ್ದಾಳೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button