Latest

ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ ನಡೆಸಿದ ಪ್ರೇಮಿಗಳು

ಪ್ರಗತಿವಾಹಿನಿ ಸುದ್ದಿ; ಮೈಸೂರು: ರಾತ್ರಿ ವೇಳೆ ಪಾರ್ಕ್ ನಲ್ಲಿ ಕುಳಿತಿದ್ದ ಪ್ರೇಮಿಗಳಿಗೆ ಬುದ್ಧಿ ಹೇಳಿದ್ದಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಸಿದ್ಧಾರ್ಥ ನಗರದಲ್ಲಿ ಬೆಳಕಿಗೆ ಬಂದಿದೆ.

ನಿನ್ನೆ ರಾತ್ರಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಗಾಯಾಳು ಪೊಲೀಸ್ ಮುರಳಿಧರ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್ ಮುರಳಿಧರ ಅವರು, ಪಾರ್ಕಿನಲ್ಲಿ ಪ್ರೇಮಿಗಳು ಕುಳಿತಿದ್ದನ್ನು ಕಂಡು ಇಷ್ಟು ಹೊತ್ತಲ್ಲಿ ಇಲ್ಲಿ ಕುಳಿತುಕೊಳ್ಳದಂತೆ ಬುದ್ಧಿ ಹೇಳಿದ್ದಾರೆ. ಇದರಿಂದ ಕೋಪಗೊಂಡು ಸ್ಥಳದಿಂದ ತೆರಳಿದ ಯುವಕರು ಬೈಕ್ ನಲ್ಲಿ ವಾಪಸ್ ಬಂದು ರಾಡ್ ನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ನಜಾರ್ ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಭಟನೆ ವೇಳೆ ರೈತ ನಾಯಕ ದಾರುಣ ಸಾವು

Related Articles

Back to top button