*ಮೆಟಾ ಕಚೇರಿಗೆ ಯುವ ಕಾಂಗ್ರೆಸ್‌ ಮುತ್ತಿಗೆ*: *ಹೂವಿನ ಕುಂಡಗಳನ್ನೇ ಎಸೆದ ಕಾರ್ಯಕರ್ತರು*

ಪ್ರಗತಿವಾಹಿನಿ ಸುದ್ದಿ: ಯುವ ಕಾಂಗ್ರೆಸ್ ನಾಯಕರ ಸಾಮಾಜಿಕ ಜಾಲತಾಣ ಖಾತೆಗಳನ್ನು ಸ್ಥಗಿತಗೊಳಿಸಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಜಿಟಲ್ ವೇದಿಕೆಗಳಲ್ಲೂ ರಾಜಕೀಯ ನಡೆಯುತ್ತಿದೆಯೇ ಎಂಬ ಪ್ರಶ್ನೆ ಎತ್ತಿರುವ ಕಾರ್ಯಕರ್ತರು, ಮೆಟಾ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಹೈದರಾಬಾದ್‌ನ ಮೆಟಾ ಕಚೇರಿ ಎದುರು ಪ್ರತಿಭಟನೆ ವೇಳೆ ಆಕ್ರೋಶದ ಕಿಡಿ ಹೆಚ್ಚಾಗಿ, ಕಚೇರಿ ಆವರಣದಲ್ಲಿದ್ದ ಹೂವಿನ ಕುಂಡಗಳನ್ನು ಎಸೆದು ಧ್ವಂಸಗೊಳಿಸಿದ್ದಾರೆ. ಒಂದು ವಾರದೊಳಗೆ ನಿರ್ಬಂಧ ತೆರವುಗೊಳಿಸದಿದ್ದರೆ ಹೋರಾಟ ತೀವ್ರಗೊಳಿಸುವ ಎಚ್ಚರಿಕೆಯನ್ನೂ ನೀಡಿದ್ದಾರೆ. ಈ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ … Continue reading *ಮೆಟಾ ಕಚೇರಿಗೆ ಯುವ ಕಾಂಗ್ರೆಸ್‌ ಮುತ್ತಿಗೆ*: *ಹೂವಿನ ಕುಂಡಗಳನ್ನೇ ಎಸೆದ ಕಾರ್ಯಕರ್ತರು*