Belagavi NewsKannada NewsKarnataka News

ನಾಳೆ ಕೇಂದ್ರ ಸರಕಾರದ ವಿರುದ್ಧ ಸಂಸದೆ ಮಂಗಲಾ ಅಂಗಡಿ ನಿವಾಸದೆದುರು ಯುವ ಕಾಂಗ್ರೆಸ್ ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೇಂದ್ರ ಸರಕಾರ ಬಡವರಿಗೆ ಅಕ್ಕಿ ನೀಡುವಲ್ಲಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿರುವ ಬೆಳಗಾವಿ ಜಿಲ್ಲಾ ಗ್ರಾಮೀಣ ಯುವ ಕಾಂಗ್ರೆಸ್, ಸದಾಶಿವನಗರದಲ್ಲಿರುವ ಸಂಸದೆ ಮಂಗಲ ಅಂಗಡಿ ಅವರ ನಿವಾಸದೆದುರು ಜು.5ರಂದು ಮಧ್ಯಾಹ್ನ 12 ಗಂಟೆಗೆ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನ ಜಿಲ್ಲೆ ಹಾಗೂ ತಾಲೂಕು ಮುಂಚೂಣಿ ಘಟಕಗಳ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬೆಳಗಾವಿ ಗ್ರಾಮಿಣ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕಾರ್ತಿಕ್ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button