Belagavi NewsBelgaum NewsKannada NewsKarnataka News

*ಬೆಳಗಾವಿಯಲ್ಲಿ ಖಾಲಿ ಹುದ್ದೆ ಭರ್ತಿಗೆ ಯುವಕರ ಆಗ್ರಹ: ಪೊಲೀಸರ ಜೊತೆ ವಾಗ್ವಾದ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಬೆಳಗಾವಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

 ಬೆಳಗಾವಿ ಸರ್ದಾರ್ ಮೈದಾನದಿಂದ ಪಾದಯಾತ್ರೆ ಮೂಲಕ ಚೆನ್ನಮ್ಮ ವೃತ್ತಕ್ಕೆ ಆಗಮಿಸಿ ಎಬಿವಿಪಿ ಕಾರ್ಯಕರ್ತರು ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದು. ಇದೇ ವೇಳೆ ಘಟನಾ ಸ್ಥಳಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಬರಬೇಕೆಂದು ಎಬಿವಿಪಿ ಕಾರ್ಯಕರ್ತರು ಪಟ್ಟುಹಿಡಿದರು. ಯಾವುದೇ ಅನುಮತಿ ಇಲ್ದೆ ಪ್ರತಿಭಟನೆಗೆ ಅವಕಾಶ ಕೊಡೊದಿಲ್ಲ ಎಂದು ಪೊಲೀಸರು ಮನವರಿಕೆ ಮಾಡೋ ಕೆಲಸ ಮಾಡಿದ್ರು.ಆದರೇ ಪೊಲೀಸರ ಮನವೊಲಿಕೆಗೂ ಬಗ್ಗದ ಹಿನ್ನೆಲೆ ಎಬಿವಿಪಿ ಕಾರ್ಯಕರ್ತರನ್ನ ವಶಕ್ಕೆ ಪಡೆಯಲು ಪೊಲೀಸರು ಮುಂದಾಗುತ್ತಾರೆ.

ಈ ವೇಳೆ ಕೆಲಕಾಲ ಪೊಲೀಸರು ಹಾಗೂ ವಿದ್ಯಾರ್ಥಿ ಸಂಘಟ ಕಾರ್ಯಕರ್ತರ ನಡುವೆ ವಾಗ್ವಾದ ಮಾತಿನ ಚಕಮಕಿಗೆ ಚೆನ್ನಮ್ಮ ವೃತ್ತ ಸಾಕ್ಷಿಯಾಯಿತು.

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2.50ಲಕ್ಷಕ್ಕೂ ಹೆಚ್ಚಿನ ಹುದ್ದೆಗಳು ಖಾಲಿ ಇದ್ದು ಆ ಹುದ್ದೆಗಳ ಭರ್ತಿ ಮಾಡಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಎಂದು ಆರೋಪಿಸಿದ ಕಾರ್ಯಕರ್ತರು, ಕಳೆದ ಐದು ವರ್ಷಗಳಿಂದ ಯಾವುದೇ ನೇಮಕಾತಿ ನಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲಕ್ಷಾಂತರ ಹುದ್ದೆಗಳು ಖಾಲಿ ಇವೆ. ಆದರೂ ಸರ್ಕಾರ ನೇಮಕಾತಿ ಮಾಡುತ್ತಿಲ್ಲ ಇದರ ಪರಿಣಾಮ ವಿದ್ಯಾರ್ಥಿಗಳ ಭವಿಷ್ಯ ಕತ್ತಲಿಗೆ ದುಡೂವಂತಿದೆ. ಹಾಗಾಗಿ ಸರ್ಕಾರದ ಇಲಾಖೆಗಳಲ್ಲಿ ಖಾಲಿ ಇರೋ ಹುದ್ದೆಗಳ ಭರ್ತಿ ಮಾಡಬೇಕು. ನೇಮಕಾತಿ ವೇಳೆ ವಯೋಮಿತಿ ಸಡಿಲಿಕೆ ಮಾಡಬೇಕು. ರಾಜ್ಯದ ವಿಶ್ವವಿದ್ಯಾಲಯಗಳಿಗೆ  ಅನುದಾನ ನೀಡುವುದು ಸೇರಿದಂತೆ ಸಮಯಕ್ಕೆ ಸರಿಯಾಗಿ ಫಲಿತಾಂಶ ಮತ್ತು ಅಂಕಪಟ್ಟಿ ಹಾಗೂ ವಿದ್ಯಾರ್ಥಿಗಳಿಗೆ ಸಮರ್ಪಕ ಮಾಸಿಕ ವೇತನ ಹಾಗೂ ಪ್ರೊತ್ಸಾಹಧನ ನೀಡುವಂತೆ ಆಗ್ರಹಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button