ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಕುಡಿದ ಮತ್ತಿನಲ್ಲಿ ಯುವಕನೊಬ್ಬ ಪೊಲೀಸ್ ಜೀಪ್ ನ್ನೇ ಅಪಹರಿಸಿ ಪರಾರಿಯಾಗಿರುವ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ನಡೆದಿದೆ.
ರಸ್ತೆ ಬದಿ ನಾಲ್ವರು ಯುವಕರು ಕುಡಿದ ಮತ್ತಿನಲ್ಲಿ ಗಲಾಟೆ ಮಾಡುತ್ತಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ ನಲ್ಗೊಂಡ ಮಿರಿಯಾಲಗುಡ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ರಮೇಶ್ ಜೀಪು ನಿಲ್ಲಿಸಿ ಕೆಳಗಿಳಿದು ಬಂದು ವಿಚಾರಿಸಿದ್ದಾರೆ. ಈ ವೇಳೆ ಯುವಕರು ಇನ್ಸ್ ಪೆಕ್ಟರ್ ಗೆ ಬೆದರಿಕೆ ಹಾಕಿದ್ದಾರೆ. ಪೊಲೀಸ್ ಹಾಗೂ ಯುವಕರ ನಡುವೆ ವಾಗ್ವಾದ ನಡೆದಿದೆ.
ಗಲಾಟೆ ನಡೆಯುತ್ತಿದ್ದ ವೇಳೆ ಯುವಕರ ಗುಂಪಿನಲ್ಲಿದ್ದ ವಂಶಿ ಎಂಬಾತ ಪೊಲೀಸ್ ಹತ್ತಿ ಸ್ಟಾರ್ಟ್ ಮಾಡಿ ಸ್ಥಳದಿಂದಲೆ ಪರಾರಿಯಾಗಿದ್ದಾನೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ