Kannada NewsKarnataka NewsLatest

ಮೇಕೆ , ಎಮ್ಮೆ ಮೇಯಿಸದಂತೆ ಎಚ್ಚರಿಸಿದ್ದಕ್ಕೆ ಯುವಕನ ಬರ್ಬರ ಹತ್ಯೆ

 

ಪ್ರಗತಿವಾಹಿನಿ ಸುದ್ದಿ, ಅಗಸಗಿ :

ಬೆಳಗಾವಿ ತಾಲೂಕಿನ ಮುತ್ಯಾನಟ್ಟಿ ಗ್ರಾಮದಲ್ಲಿ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಅದೆ ಗ್ರಾಮದ ಎರಡು ಕುಟುಂಬದ ಮಧ್ಯೆ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ನಾಲ್ಕು ಜನ ಸೇರಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಸಿದ್ರಾಯಿ ಕಣ್ಣಪ್ಪಾ ನಾಯಿಕ (30) ಕೊಲೆಯಾದ ದುರ್ದೈವಿ , ಹಳೆ ವೈಷಮ್ಯವೆ ವ್ಯಕ್ತಿಯನ್ನು ಕೆಣಕಿ ಕೊಲೆ ಮಾಡಲು ಕಾರಣವಾಗಿದೆ.

ಯಾಕೆಂದರೆ ಕೆಲವು ದಿನಗಳ ಹಿಂದೆ ಆತನ ಅಣ್ಣನ ಮೇಲೆ ಕೂಡಾ ಇದೆ ವ್ಯಕ್ತಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು.

ಈ ಕುರಿತು ಕಾಕತಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಏನಿದು ಘಟನೆ :
ಸಿದ್ರಾಯಿ ನಾಯಕ ಮುತ್ಯಾನಟ್ಟಿಯಲ್ಲಿರುವ ತಮ್ಮ ಜಮೀನಲ್ಲಿ ಮಾವಿನ ತೋಟ ಮಾಡಿದ್ದು ಅದರಲ್ಲಿ ಪ್ರತಿ ದಿನ ಆರೋಪಿ ಕುಟುಂಬದವರು ಕುರಿ ಮತ್ತು ಎಮ್ಮೆಗಳನ್ನು ಇವರಿಲ್ಲದ ಸಮಯದಲ್ಲಿ ಮೇಯಿಸಲು ಹೋಗುತ್ತಿದ್ದರು.

ಈ ವಿಷಯ ತಿಳಿದ ಸಿದ್ರಾಯಿ ಜಮೀನಿನಲ್ಲಿ ಮೆಯಿಸದಂತೆ ಹೇಳಿದ್ದಾನೆ. ಆದರೆ ಇದಕ್ಕೆ ಕ್ಯಾರೆ ಅನ್ನದ ಆರೋಪಿ ಕುಟುಂಬದವರು ಹಳೇ ಚಾಳಿ ಮುಂದುವರಿದ್ದರಿಂದ ಇವರ ನಡುವೆ ವಾದ ವಿವಾದ ನಡೆದಿದೆ.

ನಂತರ ಸಿದ್ರಾಯಿಯನ್ನು ಹುಡುಕಿಕೊಂಡು ಹೋದ ಆರೋಪಿಗಳು ಗುರುವಾರ ರಾತ್ರಿ 9 ಗಂಟೆಗೆ ಚವ್ಹಾಟ ಗಲ್ಲಿಯ ಮ ತಮ್ಮ ಮನೆಯ ಹತ್ತಿರ ನಿಂತಿದ್ದ ಸಿದ್ರಾಯಿ ಮೇಲೆ ಹಿಂದಿನಿಂದ ಬಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಕೊಲೆಯಲ್ಲಿ ಮಹಿಳೆಯರು ಭಾಗಿಯಾಗಿದ್ದರೆಂದು ತಿಳಿದು ಬಂದಿದೆ.

ಘಟನೆ ಬಗ್ಗೆ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಕಾಕತಿ ಪಿ ಐ ಶ್ರೀಶೈಲ ಕೌಜಲಗಿ ಪರಿಶೀಲನೆ ನಡೆಸಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ.
ಸದ್ಯ ತಲೆ ಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಈ ಘಟನೆಗೆ ಸಂಭಂದಿಸಿದಂತೆ ಕಾಕತಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button