
ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಬಹಿರ್ದೆಸೆಗೆ ತೆರಳಿದ್ದ ಯುವಕನ ಮೇಲೆ ಒಂಟಿ ಸಲಗ ದಾಳಿ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ.
ಇಲ್ಲಿನ ಮೇಲುಕಮನಹಳ್ಳಿಯಲ್ಲಿ ಈ ಘಟನೆ ನದೆದಿದ್ದು, ಬಹಿರ್ದೆಸೆಗೆ ಯುವಕ ತೆರಳಿದ್ದ ವೇಳೆ ಆನೆ ದಾಳಿ ಮಾಡಿದೆ. ಯುವಕ ನಾಗೇಶ್ ನನ್ನು ಆನೆ ಸೊಂಡಿಲಿನಿಂದ ಎತ್ತಿ ಎಸೆದಿದೆ.
ಯುವಕ ರಾತ್ರಿಯಿಡಿ ಕಾಡಿನಲ್ಲೇ ನರಳಾಡಿದ್ದು, ಬೆಳಿಗ್ಗೆ ಸ್ಥಳಿಯರು ಯುವಕನನ್ನು ಗಮಿನಿಸಿ ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ತಪಾಸಣೆ ನಡೆಸಿದ ವೇಳೆ ಯುವಕನ ಬಲಗಾಲು ಸ್ವಾದೀನ ತಪ್ಪಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ