
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಯುವಕನೊಬ್ಬನನ್ನು ಸ್ನೇಹಿತರೇ ಕಾರು ಹತ್ತಿಸಿ ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಬೈರಗೊಂಡನಹಳ್ಳಿಯಲ್ಲಿ ನಡೆದಿದೆ.
ಚಂದನ್ (30) ಕೊಲೆಯಾದ ಯುವಕ. ಬೈಕ್ ನಲ್ಲಿದ್ದ ಯುವಕನಿಗೆ ಕಾರು ಡಿಕ್ಕಿ ಹೊಡೆಸಿ ಬೀಳಿಸಿ ಆತನ ಮೇಲೆ ಕಾರು ಹತ್ತಿಸಿ ಕೊಲೆಗೈದಿದ್ದಾರೆ.
ಯುವಕನ ಸ್ನೇಹಿತರಾದ ಚಂದನ್ ಹಾಗೂ ಅಭಿ ಎಂಬುವವರು ಈ ಕೃತ್ಯವೆಸಗಿದ್ದಾರೆ ಎನನ್ಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.