*ಸಿದ್ದರಾಮಯ್ಯನವರು ರಾಜೀನಾಮೆ ನೀಡಿದರೆ ಯುವಕರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆ ಖಂಡಿಸಿ ಗೋಕಾಕದ ಬಸವೇಶ್ವರ ವೃತ್ತದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಮಾನವ ಸರಪಳಿ ಮಾಡಿ ಪ್ರತಿಭಟನೆ ನಡೆಸಿದರು
ಸಿದ್ದರಾಮಯ್ಯನವರು ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಹೊಂದಿಲ್ಲ, ಆದರೆ ಒಂದು ವರ್ಷದಿಂದ ಅನುಮತಿ ಕೇಳಿದ್ದ ಪ್ರಕರಣಗಳು ಬಾಕಿ ಇದ್ದಾಗ ಕೇಂದ್ರ ಸರಕಾರದ ಕೈಗೊಂಬೆಯಾಗಿ ರಾಜ್ಯಪಾಲರು ತರಾತುರಿಯಲ್ಲಿ ಸಿದ್ದರಾಮಯ್ಯನವರ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು ಸರಿಯಲ್ಲ, ಇದು ಉದ್ದೇಶ ಪೂರ್ವಕವಾಗಿ ಮಾಡಲಾಗಿದೆಯೆಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೇಸ್ ಮುಖಂಡ ಡಾ: ಮಹಾಂತೇಶ ಕಡಾಡಿ ಮಾತನಾಡಿ ಪದೆ ಪದೆ ಸಿದ್ದರಾಮಯ್ಯನವರ ರಾಜೀನಾಮೆ ಕೇಳುವ ಶಾಸಕ ರಮೇಶ ಜಾರಕಿಹೋಳಿಯವರ ಮೇಲೆ ಹಲವಾರು ಪ್ರಕರಣಗಳಿದ್ದರೂ ರಾಜೀನಾಮೆ ನೈತಿಕತೆ ಪಾಠ ಮಾಡುತ್ತಿದ್ದಾರೆ. ಒಂದು ವೇಳೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದರೆ ಹಲವಾರು ಯುವಕರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ನಂತರ ಪಾದಯತ್ರೆ ಮುಖಾಂತರ ತಹಶಿಲ್ದಾರ ಕಚೇರಿಗೆ ತೆರಳಿ ರಾಜ್ಯಪಾಲರ ನಡೆ ವಿರುದ್ದ ರಾಷ್ಟ್ರಪತಿಗಳಿಗೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಮನವಿ ನೀಡಿದರು ಈ ಸಂದರ್ಭದಲ್ಲಿ ಅಶೋಕ ಪೂಜೇರಿ, ಸಿದ್ದಲಿಂಗ ದಳವಾಯಿ, ಚಂದ್ರಶೇಖರ ಕೊಣ್ಣೂರ ಸೇರಿದಂತೆ ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ