
ಪ್ರಗತಿವಾಹಿನಿ ಸುದ್ದಿ: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿ ವಿಡಿಯೋಂದನ್ನು ಸಮೀರ್ ಎಂ.ಡಿ. ದೂತ ” ಎಂಬ ಯೂಟ್ಯೂಬರ್ ಒಬ್ಬ ಹರಿಬಿಟ್ಟಿದ್ದ. ನ್ಯಾಯಾಲಯವು ವಿಡಿಯೋ ತೆಗೆದುಹಾಕುವಂತೆ ಮತ್ತು ಈ ಕುರಿತು ವಿಡಿಯೋ ಮಾಡದಂತೆ ತಡೆಯಾಜ್ಞೆ ನೀಡಿತ್ತು. ನ್ಯಾಯಾಲಯದ ತಡೆಯಾಜ್ಞೆ ಆದೇಶವನ್ನು ಉಲ್ಲಂಘಿಸಿ, ಎರಡನೇ ವಿಡಿಯೋ ಬಿಟ್ಟದ್ದ. ಈ ಹಿನ್ನೆಲೆಯಲ್ಲಿ ” ಸಮೀರ್ ಎಂ.ಡಿ. ದೂತ ” ಎಂಬ ವ್ಯಕ್ತಿ ಹಾಗೂ ಯೂಟ್ಯೂಬ್ ಚಾನಲ್ ದೂತದ ಮೇಲೆ ಮಾನಷ್ಟ ಮೊಕದ್ದಮೆ ದಾಖಲಾಗಿದೆ.
ಸಮೀರ್ ಎಂ.ಡಿ ವಿರುದ್ಧ ಹತ್ತು ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳ ಡಿ. ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ. ಹೂಡಿದ್ದಾರೆ.
ನ್ಯಾಯಾಲಯವು ಯೂಟ್ಯೂಬರ್ ಗೆ ನೋಟೀಸ್ ಜಾರಿ ಮಾಡಿ, ಹಾಜರಾಗುವಂತೆ ಸೂಚನೆಯನ್ನು ನೀಡಿದೆ. ಹಾಗೂ ಮುಖ್ಯವಾಗಿ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೋ ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಆದೇಶಮಾಡಿದೆ. ಧರ್ಮಸ್ಥಳ ಪರ ರಾಜಶೇಖರ ಹಿಲ್ಯಾರ್ ಮಂಡಿಸಿದ ವಾದವನ್ನು ಆಲಿಸಿದ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಧೀಶರಾದ ಎಸ್. ನಟರಾಜ್ ಅವರು ಈ ಆದೇಶ ಹೊರಡಿಸಿದ್ದಾರೆ.