*ಯುವಜನತೆಗೆ ಸರ್ಕಾರದಿಂದ ಗುಡ್ ನ್ಯೂಸ್: ಯುವನಿಧಿ ನೋಂದಣಿ ಪ್ರಕ್ರಿಯೆಗೆ ಸಿಎಂ ಚಾಲನೆ*
5ನೇ ಗ್ಯಾರಂಟಿ ಯೋಜನೆ ಆರಂಭ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ಯೋಜನೆಗೆ ಚಾಲನೆ ದೊರೆತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ ನಿದಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು. ಈ ಮೂಲಕ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದಂತಾಗಿದೆ.
ನಿರುದ್ಯೋಗಿ ಯುವಕ-ಯುವತಿಯರಿಗೆ ಮಾಸಿಕ ಭತ್ಯೆ ನೀಡುವ ಯೋಜನೆ ಇದಾಗಿದ್ದು, ಪದವೀಧರರಿಗೆ 3000 ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂ ಸಿಗಲಿದೆ. ಯುವನಿಧಿಗೆ ಅರ್ಜಿ ಸಲ್ಲಿಸಲು ಕರ್ನಾಟಕದವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಘೋಷ ವಾಕ್ಯದಲ್ಲಿ ಕಾರ್ಯಕ್ರಮ ಆಯೋಜಿಸಿದೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಶರಣಪ್ರಕಾಶ್ ಪಾಟೀಲ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾಗೇಂದ್ರ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಶ್ರೀ ರಾಜೀವ್ ಗೌಡ , ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್ ಘನ ಉಪಸ್ಥಿತರಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ವಹಿಸಿದ್ದರು.
ಕಾರ್ಯಕ್ರಮದ ಉದ್ಘಾಟನೆ ವೇಳೆ ಮುಖ್ಯಮಂತ್ರಿಗಳಿಗೆ ಸಾಂಕೇತಿಕವಾಗಿ ಒಬ್ಬ ಯುವಕ ಮತ್ತು ಓರ್ವ ಯುವತಿ ಜತೆಯಾದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ