Kannada NewsKarnataka NewsLatestPolitics

*ಸರ್ಕಾರದ 5ನೇ ಗ್ಯಾರಂಟಿ ‘ಯುವನಿಧಿ ಯೋಜನೆ’ಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ಯೋಜನೆ ಮಹತ್ವಾಕಾಂಕ್ಷಿ ಯುವನಿಧಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ವಿವೇಕಾನಂದ ಜಯಂತಿ ದಿನವೇ ಈ ಯೋಜನೆ ಜಾರಿಗೆ ಬಂದಿರುವುದು ವಿಶೇಷ.

ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಯುವನಿಧಿ ಯೋಜನೆಗೆ ಚಾಲನೆ ನೀಡಿದರು. ಈ ಮೂಲಕ ನುಡಿದಂತೆ ನಡೆದಿದ್ದೇವೆ. 5 ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ಈಗಾಗಲೇ 65 ಸಾವಿರ ಡಿಪ್ಲೋಮಾ ಹಾಗೂ ಪದವೀಧದರು ಯುವನಿಧಿ ನೋಂದಣಿ ಮಾಡಿಕೊಂಡಿದ್ದು, ಅವರ ಖಾತೆಗೆ ಇಂದು ಹಣ ಜಮಾ ಆಗಲಿದೆ. ಪದವೀಧರರಿಗೆ ಮಾಸಿಕ 3000 ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂ ಸಹಾಯಧನ ನೀಡುವುದು ಯೋಜನೆಯಾಗಿದೆ.

ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಇವರ ಜನ್ಮ ದಿನದಂದೇ ನನ್ನ ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ ಜಾರಿ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

Home add -Advt

ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸುರ್ಜೇವಾಲ ಅವರು ಚುನಾವಣಾ ಪೂರ್ಣ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ.

ನಿರುದ್ಯೋಗ ಸಮಸ್ಯೆ, ರೈತರ ಸಮಸ್ಯೆ ಹೆಚ್ಚಾಗಿ, ಆಹಾರ ಪದಾರ್ಥಗಳ ಬೆಲೆ ಗಗನಕ್ಕೆ ಏರಿರುವ ಸಂದರ್ಭದಲ್ಲಿ ಸಮಾಜದ ಎಲ್ಲಾ ವರ್ಗಗಳ ಸಮಸ್ಯೆಗೆ ಪರಿಹಾರವಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆವು. ಪ್ರಣಾಳಿಕೆಯಲ್ಲಿ ಘೋಷಿಸಿದೆವು. ಘೋಷಿಸಿದಂತೆ ಜಾರಿ ಮಾಡಿದ್ದೇವೆ. ಮೊದಲ ಗ್ಯಾರಂಟಿ ಯೋಜನೆಯಿಂದಾಗಿ 130 ಕೋಟಿ 28 ಲಕ್ಷ ಮಹಿಳೆಯರು, ಯುವತಿಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. 1 ಕೋಟಿ 65 ಲಕ್ಷ ಕುಟುಂಬಗಳಿಗೆ ಉಚಿತವಾಗಿ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಈ ಕೋಟಿ ಕುಟುಂಬಗಳು ನಯಾಪೈಸೆ ವಿದ್ಯುತ್ ಬಿಲ್ ಕಟ್ಟುವ ಹಾಗಿಲ್ಲ. ಇದೇ ರೀತಿ 5 ಕೆಜಿ ಅಕ್ಕಿ, 5 ಕೆಜಿ ಅಕ್ಕಿಯ ಹಣವನ್ನು ಪ್ರತೀ ಕುಟುಂಬಗಳಿಗೆ ಕೊಡುತ್ತಿದ್ದೇವೆ. 1 ಕೋಟಿ 17 ಲಕ್ಷ ಮಹಿಳೆಯರಿಗೆ, ಯುವತಿಯರಿಗೆ ಪ್ರತೀ ತಿಂಗಳು 2000 ರೂ ತಲುಪಿಸುತ್ತಿದ್ದೇವೆ‌. ಇಂಥಾ ಸಾಧನೆ ಹಿಂದೆ ಯಾವ ಕಾಲದಲ್ಲೂ ಆಗಿಲ್ಲ. ಇದನ್ನೆಲ್ಲಾ ಮಾಡಿದ್ದು ನಾವು. ನಮ್ಮದೇ ನುಡಿದಂತೆ ಮಾಡಿ ತೋರಿಸಿದ ಸರ್ಕಾರ.

ಇಂದು ಯುವನಿಧಿ ಜಾರಿ ಮಾಡಿದ್ದೇವೆ. ಯುವಕ ಯುವತಿಯರಿಗೆ ಹಣದ ಜತೆಗೆ ಉದ್ಯೋಗ ಪಡೆದುಕೊಳ್ಳಲು ಅಗತ್ಯವಾದ ಕೌಶಲ್ಯ ತರಬೇತಿಯನ್ನೂ ನೀಡಿ ಅವರಿಗೆ ಉದ್ಯೋಗ ಕೊಡಿಸುವ ದಿಕ್ಕಿನಲ್ಲಿ ನಮ್ಮ ಪ್ರಯತ್ನ ಮುಂದುವರೆಯಲಿದೆ. ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಈ ಯುವನಿಧಿ ಯೋಜನೆ ಜಾರಿ ಮಾಡಿದ್ದೇವೆ ಎಂದರು.

ವಿವೇಕಾನಂದರ ಜನ್ಮ ದಿನದಂದೇ ಯುವನಿಧಿ ಯೋಜನೆಯನ್ನು ನಾವು ಜಾರಿ ಮಾಡಿದ್ದೇವೆ. ಈಗಾಗಲೇ 70 ಸಾವಿರ ಯುವಕ ಯುವತಿಯರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ‌ ಎಂದು ವಿವರಿಸಿದರು. ರಾಜೀವ್ ಗಾಂಧಿ ಅವರು ದೇಶದ ಯುವಕರ ಭವಿಷ್ಯಕ್ಕಾಗಿ ಸದಾ ತುಡಿಯುತ್ತಿದ್ದರು. ಅವರ ಆಶಯಕ್ಕೆ ಪೂರಕವಾಗಿ ಯುವನಿಧಿ ಯೋಜನೆ ಮತ್ತು ನಮ್ಮ ಸರ್ಕಾರ ಕೆಲಸ ಮಾಡಲಿದೆ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button