ಪ್ರಗತಿವಾಹಿನಿ ಸುದ್ದಿ: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಗೃಹ ಸಚಿವಾಲಯ ಝಡ್ ಶ್ರೇಣಿಯ ಭದ್ರತೆ ನೀಡಿದೆ.
ಚುನಾವಣಾ ಆಯೊಗದ ಕಚೇರಿಯಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ನಡೆಸಿದ್ದರು. ಬೆದರಿಕೆ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವಾಲಯ ಭದ್ರತೆ ಕಲ್ಪಿಸಿದೆ.
ಕೇಂದ್ರ ಚುನವಣಾ ಆಯೊಗದ ಮುಖ್ಯ ಕಚೇರಿಯ ಹೊರಗಡೆಗೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟಿಎಂಸಿ ನಾಯಕರನ್ನು ದೆಹಲಿ ಪೊಲಿಸರು ಬಂಧಿಸಿದ್ದರು. ಇಂದು ಮಂದಿರ್ ಮಾರ್ಗ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಮುಂದುವರೆಸಿದ್ದಾರೆ. ಕೇಂದ್ರೀಯ ತನಿಖಾ ದಳ, ರಾಷ್ತ್ರೀಯ ತನಿಖಾ ಸಂಸ್ಥೆ, ಆದಾಯ ತೆರಿಗೆ ಇಲಾಖೆ ಮುಖ್ಯಸ್ಥರನ್ನು ಬದಲಾಯಿಸಬೇಕು ಎಂದು ಒತ್ತಾಯಿಸಿದ್ದರು.
ಚುನಾವಣಾ ಆಯೋಗದ ಕಚೇರಿ ಹೊರಗಡೆ 24 ಗಂಟೆ ಧರಣಿ ಕೂರುವುದಾಗಿ ಘೋಷಿಸಿದ್ದರು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಕೇದ್ರ ಚುನಾವಣಾ ಮುಖ್ಯ ಆಯುಕ್ತರಿಗೆ ಭದ್ರತೆ ಕಲ್ಪಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ