Kannada NewsKarnataka NewsLatestPolitics

*ಸಚಿವ ಜಮೀರ್ ಅಹ್ಮದ್ ವಿರುದ್ಧ ಐಟಿ ಇಲಾಖೆಗೆ ದೂರು ನೀಡಿದ ಹಿಂದೂ ಸಂಘಟನೆ ಕಾರ್ಯಕರ್ತ*

ಪ್ರಗತಿವಾಹಿನಿ ಸುದ್ದಿ: ವಸತಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ನೀಡಿರುವ ಘಟನೆ ನಡೆದಿದೆ.

ಹಿಂದೂಪರ ಸಂಘಟನೆ ಕಾರ್ಯಕರ್ತ ತೇಜಸ್ ಗೌಡ ಎಂಬುವವರು ಸಚಿವ ಜಮೀರ್ ಅಹ್ಮದ್ ವಿರುದ್ಧ ಐಟಿ ಇಲಾಖೆಗೆ ದೂರು ನೀಡಿದ್ದಾರೆ.

ಬಳ್ಲಾರಿ ಗಲಾಟೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬುವವರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಚಿವ ಜಮೀರ್ ಅಹ್ಮದ್, ಮೃತ ರಾಜಶೇಖರ್ ಅವರ ನಿವಾಸಕ್ಕೆ ತೆರಳಿ, ಕುಟುಂಬಕ್ಕೆ ಸಾಂತ್ವನ ಹೇಳಿದ್ದರು. ಈ ವೇಳೆ ಮೃತನ ಕುಟುಂಬಕ್ಕೆ 25 ಲಕ್ಷ ನಗದು ಹಣ ಪರಿಹಾರ ನೀಡಿದ್ದರು. ಆರ್ ಬಿಐ ನಿಯಮದ ಪ್ರಕಾರ ಓರ್ವ ವ್ಯಕ್ತಿ 2 ಲಕ್ಷಕ್ಕಿಂತ ಹೆಚ್ಚು ನಗದು ಹಣ ಇಟ್ಟುಕೊಳ್ಳುವಂತಿಲ್ಲ. ಆದರೆ ಸಚಿವ ಜಮೀರ್ ಅಹ್ಮದ್ 25 ಲಕ್ಷ ನಗದು ಹಣ ನೀಡಿರುವುದು ಸಾಕಷ್ಟು ಚರ್ಚೆಗೆ ಕಾರಣವಗಿತ್ತು. ಈ ಹಿನ್ನೆಲೆಯಲ್ಲಿ ತೇಜಸ್ ಗೌಡ ಎಂಬುವವರು ಐಟಿ ಇಲಾಖೆಗೆ ದೂರು ನೀಡಿದ್ದು, ಹಣದ ಮೂಲದ ಬಗ್ಗೆ ತನಿಖೆ ನಡೆಸುವಂತೆ ಕೋರಿದ್ದಾರೆ.

Home add -Advt

Related Articles

Back to top button