Latest

ಶಾಸಕ ಜಮೀರ್ ಅಹ್ಮದ್ ಗೆ ACB ಶಾಕ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಡಿ ದಾಳಿ ಬೆನ್ನಲ್ಲೇ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಎಸಿಬಿ ಶಾಕ್ ನೀಡಿದ್ದು, ಇಂದು ಬೆಳ್ಳಂ ಬೆಳಿಗ್ಗೆ ಜಮೀರ್ ಅಹ್ಮದ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಬೆಂಗಳೂರಿನ ಕಂಟೋನ್ಮೆಂಟ್ ನಲ್ಲಿರುವ ಜಮೀರ್ ಅಹ್ಮದ್ ನಿವಾಸ, ಸಿಲ್ವರ್ ಓಕ್ ಅಪಾರ್ಟ್ ಮೆಂಟ್ ನಲ್ಲಿರುವ ಫ್ಲಾಟ್, ಸದಾಶಿವನಗರದಲ್ಲಿರುವ ಗೆಸ್ಟ್ ಹೌಸ್, ಬನಶಂಕರಿಯಲ್ಲಿರುವ ಜಿ.ಕೆ ಅಸೋಸಿಯೇಟ್ಸ್ ಕಚೇರಿ, ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

5 ವಾಹನಗಳಲ್ಲಿ ಓರ್ವ ಡಿವೈಎಸ್ ಪಿ, ಇಬ್ಬರು ಇನ್ಸ್ ಪೆಕ್ಟರ್ ನೇತೃತ್ವದಲ್ಲಿ 10ಕ್ಕೂ ಹೆಚ್ಚು ಎಸಿಬಿ ಅಧಿಕರಿಗಳ ತಂಡ ದಾಳಿ ನಡೆಸಿದೆ.

ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ ಸುದ್ದಿ ಕೇಳುತ್ತಿದ್ದಂತೆ ಅಭಿಮಾನಿಗಳು ಜಮೀರ್ ನಿವಾಸಕ್ಕೆ ಆಗಮಿಸಿದ್ದು, ಎಸಿಬಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆಯೂ ನಡೆದಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

Related Articles

Back to top button