

ಪ್ರಗತಿವಾಹಿನಿ ಸುದ್ದಿ: ಸಚಿವ ಜಮೀರ್ ಅಹ್ಮದ್ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕ್ರಮ ತೆಗೆದುಕೊಂಡಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಸಚಿವ ಜಮೀರ್ ಅಹ್ಮದ್ ವಿರುದ್ಧ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಕ್ರಮಕ್ಕೆ ರಾಜ್ಯಪಾಲರು, ಹೈಕೋರ್ಟ್ ಅಡ್ವೋಕೇಟ್ ಜನರಲ್ ಗೆ ಪತ್ರ ಬರೆದಿದ್ದಾರೆ. ಇದರಿಂದಾಗಿ ಜಮೀರ್ ಅಹ್ಮದ್ ಗೆ ಸಂಕಷ್ಟ ಎದುರಾಗಿದೆ.
ಹೈಕೋರ್ಟ್ ತೀರ್ಪು ರಾಜಕೀಯ ಪ್ರೇರಿತ ಎಂದು ಜಮೀರ್ ಅಹ್ಮದ್ ಹೇಳಿದ್ದರು.