GIT add 2024-1
Beereshwara 33

*ಸಚಿವ ಜಮೀರ್ ಅಹ್ಮದ್ ಆಸ್ಪತ್ರೆಗೆ ದಾಖಲು*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ವಸತಿ ಸಚಿವ ಜಮೀರ್ ಅಹ್ಮದ್ ಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಚಿವ ಜಮೀರ್ ಅಹ್ಮದ್ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಚಿತ್ರದುರ್ಗಕ್ಕೆ ತೆರಳುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆಯೇ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Emergency Service

ಚಿತ್ರದುರ್ಗದ ಉಮಾಪತಿ ಸಭಾಂಗಣದಲ್ಲಿ ನಿಗದಿಯಾಗಿದ್ದ ಪ್ರಚಾರ ಸಭೆಯಲ್ಲಿ ಭಾಗವಹಿಸಲು ತೆರಳುತ್ತಿದ್ದರು. ಈ ವೇಳೆ ಎದೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಜಮೀರ್ ಅಹ್ಮದ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Laxmi Tai add
Bottom Add3
Bottom Ad 2