ಪ್ರಗತಿವಾಹಿನಿ ಸುದ್ದಿ; ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಝಿಕಾ ವೈರಸ್ ಹೆಚ್ಚುತ್ತಿದ್ದು, ಇಂದು ಒಂದೇ ದಿನದಲ್ಲಿ 10 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಝಿಕಾ ಸೋಂಕಿತರ ಸಂಖ್ಯೆ 89ಕ್ಕೆ ಏರಿಕೆಯಾಗಿದೆ.
ಝಿಕಾ ಸೋಂಕಿಗೆ ಒಳಗಾದ 89 ಜನರ ಪೈಕಿ 9 ಜನರು ಐಎ ಎಫ್ ಸಿಬ್ಬಂದಿಗಳು ಸೇರಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಾನ್ಪುರದಲ್ಲಿ ಝಿಕಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್ ತುರ್ತು ಸಭೆ ನಡೆಸಿದ್ದು, ನೈರ್ಮಲ್ಯ ಕಾರ್ಯಗಳನ್ನು ವೇಗಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸೊಳ್ಲೆ ಉತ್ಪತ್ತಿ ತಡೆಗಟ್ಟುವ ನಿಟ್ಟಿನಲ್ಲಿ ಮನೆಗಳ ಸುತ್ತಮುತ್ತ ಸ್ವಚ್ಛತೆ ಹಾಗೂ ಫಾಗಿಂಗ್ ಡ್ರೈವ್ ಗಳನ್ನು ಕೈಗೊಳ್ಲುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ.
ಕಾನ್ಪುರದಲ್ಲಿ ಅಕ್ಟೋಬರ್ 23ರಂದು ಝಿಕಾ ವೈರಸ್ ಮೊದಲ ಪ್ರಕರಣ ಪತ್ತೆಯಾಗಿತ್ತು. ಭಾರತೀಯ ವಾಯುಪಡೆಯ ಅಧಿಕಾರಿಯೊಬ್ಬರು ಝಿಕಾ ಸೋಂಕಿಗೆ ಒಳಗಾಗಿದ್ದರು.
ಪಾಕಿಸ್ತಾನ ಗೆಲುವು ಸಂಭ್ರಮಿಸಿದ ಪತ್ನಿ; ಹೆಂಡತಿ ವಿರುದ್ಧವೇ ಎಫ್ ಐ ಆರ್ ದಾಖಲಿಸಿದ ಪತಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ