Latest

*ಡೆಂಘೀ ಬೆನ್ನಲ್ಲೇ ರಾಜ್ಯದಲ್ಲಿ ಝೀಕಾ ವೈರಸ್ ಪತ್ತೆ; ಓರ್ವ ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆ ಅಬ್ಬರದ ನಡುವೆ ಡೆಂಘೀ ಪ್ರಕರಣ ಹೆಚ್ಚುತ್ತಿದೆ. ಈ ಮಧ್ಯೆ ಝೀಕಾ ವೈರಸ್ ಸೋಂಕಿಗೆ ವ್ಯಕ್ತಿ ಯೋರ್ವರು ಬಲಿಯಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗದ ಗಾಂಧಿನಗರ ನಿವಾಸಿ 74 ವರ್ಷದ ವೃದ್ಧ ಝೀಕಾ ವೈರಸ್ ಗೆ ಬಲಿಯಾಗಿದ್ದಾರೆ. ಜೂನ್ 19ರಂದು ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂನ್ 21ರಂದು ಝೀಕಾ ಸೋಂಕು ದೃಢಪಟ್ಟಿತ್ತು. ಈಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಈ ಪ್ರಕರಣದ ಬೆನ್ನಲ್ಲೇ ಶಿವಮೊಗ್ಗದಲ್ಲಿ ಮತ್ತೊಂದು ಝೀಕಾ ವೈರಸ್ ಪ್ರಕರಣ ಪತ್ತೆಯಾಗಿದೆ. ಸಾಗರದ ಗಾಂಧಿನಗರದ ಯುವಕನಲ್ಲಿ ಝೀಕಾ ಸೋಂಕು ದೃಢಪಟ್ಟಿದೆ. ಯುವಕನಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. ಆದಾಗ್ಯೂ ಸೋಂಕು ಕಾಣಿಸಿಕೊಂಡಿದ್ದು, ಜಿಲ್ಲೆಯಲ್ಲಿ ಝೀಕಾ ವೈರಸ್ ಭೀತಿ ಎದುರಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button