*ಅಥಣಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಜಿಪಂ ಸಿಇಒ ರಾಹುಲ್ ಶಿಂಧೆ*

ಪ್ರಗತಿವಾಹಿನಿ ಸುದ್ದಿ, ಅಥಣಿ : ಜಿಪಂ ಸಿಇಒ ರಾಹುಲ್ ಶಿಂಧೆ ರವರು ಅಥಣಿ ತಾಲೂಕು ಪಂಚಾಯತ ಸಭಾ ಭವನದಲ್ಲಿ ಎಲ್ಲ ತಾಲೂಕ ಮಟ್ಟದ ಅಧಿಕಾರಿ ಹಾಗೂ ಎಲ್ಲ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿಗಳಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.
ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಪಂ ಸಿಇಒ ರಾಹುಲ್ ಶಿಂಧೆ ರವರು ತಾಲೂಕಿನ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸುವುದು ಹಾಗೂ ಆರ್ ಓ ಪ್ಲಾಂಟ್ಗಳನ್ನು ಸುಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದು ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನರೇಗಾ ಯೋಜನೆಗೆ ಸಂಬಂಧಿಸಿದಂತೆ ಪ್ರತಿಯೊಂದು ಗ್ರಾಮ ಪಂಚಾಯತಿಗಳಲ್ಲಿ ಸಮುದಾಯ ಕಾಮಗಾರಿ ಪ್ರಾರಂಭಿಸುವುದು ಮತ್ತು ಜನರು ಉದ್ಯೋಗ ಅಂತ ಬೇರೆ ಕಡೆಗೆ ವಲಸೆ ಹೋಗಬಾರದು ಅದಕ್ಕಾಗಿ ಸ್ವ-ಗ್ರಾಮದಲ್ಲಿ ಉದ್ಯೋಗ ನೀಡಬೇಕು. ಅದರ ಜೊತೆಗೆ ಎಪ್ರಿಲ್ 15ರ ಒಳಗಾಗಿ ಪ್ರತಿಯೊಬ್ಬ ವಿಕಲಚೇತನರಿಗೆ ಜಾಬ್ ಕಾರ್ಡ್ಗಳನ್ನು ಕಡ್ಡಾಯವಾಗಿ ನೀಡಬೇಕು ಎಂದು ಹೇಳಿದರು. ಅಥಣಿ ಗ್ರಾಮೀಣ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿಕಲಚೇತನರಿಗೆ ಜಾಬ್ ಕಾರ್ಡ್‌ಗಳನ್ನು ವಿತರಿಸಿದರು.
ತದ ನಂತರ ಸರ್ಕಾರಿ ಆಸ್ಪತ್ರೆ ಭೇಟಿ ನೀಡಿ ಅಲ್ಲಿನ ಮೇಡಿಸಿನ್‌ಗಳನ್ನು ಪರಿಶೀಲನೆ ಮಾಡಿದರು. ಆಯುಷ್ಮಾನ ಭಾರತ್ ಆರೋಗ್ಯ ಮೀತ್ರ ವಿಭಾಗಕ್ಕೆ ಬೇಟಿ ನೀಡಿ ಪರಿಶೀಲಿಸಿದರು. ಮುಂದುವರೆದು, ಝಂಜರವಾಡ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಅಥಣಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ ಮತ್ತು ಕಾಗವಾಡ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣಾ ವಾಲಿ, ಅಥಣಿ ತಹಶೀಲ್ದಾರರು ಸಿದ್ದರಾಯ ಭೋಸಗಿ, ಕಾಗವಾಡ ತಹಶೀಲ್ದಾರರು ಆರ್.ಆರ್. ಬುರ್ಲಿ, ಕಾರ್ಯನಿರ್ವಾಹಕ ಅಭಿಯಂತರರು ಗ್ರಾ.ಕು.ನೀ ಮತ್ತು ನೈರ್ಮಲ್ಯ ಇಲಾಖೆ ವಿಭಾಗ ಚಿಕ್ಕೋಡಿ ಪಾಂಡುರಂಗ ಜೋಶಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಗ್ರಾ.ಕು.ನೀ ಮತ್ತು ನೈರ್ಮಲ್ಯ ಉಪ ವಿಭಾಗ ಅಥಣಿ ರವೀಂದ್ರ ಮುರಗಾಲಿ, ಅಥಣಿ ಮತ್ತು ಕಾಗವಾಡ ತಾಪಂ ಎಲ್ಲ ತಾಲೂಕ ಮಟ್ಟದ ಅಧಿಕಾರಿಗಳು ಮತ್ತು ಎಲ್ಲ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿಗಳು ಹಾಗೂ ಎಲ್ಲ ಸಿಬ್ಬಂದ್ದಿ ವರ್ಗದವರು ಉಪಸ್ಥಿತರಿದ್ದರು.