Belagavi NewsBelgaum NewsKannada NewsKarnataka News

*ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ ರಾಹುಲ್ ಶಿಂಧೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಿತ್ತೂರು ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ  ಗುರುವಾರದಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ರವರು ಭೇಟಿ ನೀಡಿ, ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳಯನ್ನು ಪರಿಶೀಲನೆ ಮಾಡಿದರು.

ದಾಸ್ತಿಕೊಪ್ಪ ಗ್ರಾಮ ಪಂಚಾಯತಿಯ ಡಿಜಿಟಲ್ ಗ್ರಂಥಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ತದನಂತರ ದೇವರಶೀಗಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾರ್ಗನಕೊಪ್ಪ ಗ್ರಾಮ ಮತ್ತು ತಿಗಡೊಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತೇಗೂರು, ನಿಚ್ಚಣಕಿ ಗ್ರಾಮ ಪಂಚಾಯತಿಯ ಡೊಂಬರಕೊಪ್ಪ ಮತ್ತು ದೇಗಾಂವ  ಗ್ರಾಮಗಳಿಗೆ ಭೇಟಿ ನೀಡಿ ಜಲ ಜೀವನ್ ಮಿಷನ್ ಯೋಜನೆಯಡಿ ಕಾರ್ಯಾತ್ಮಕ ನಳ ಸಂಪರ್ಕ ಸ್ಥಳ ಪರಿಶೀಲನೆ ಮಾಡಿದರು.

ಮನೆಗೆ ಅಳವಡಿಸಲಾಗಿರುವ ನಳ ಸಂಪರ್ಕದ ಬಗ್ಗೆ  ಸ್ಥಳೀಯ ಫಲಾನುಭವಿಗಳೊಂದಿ ಚರ್ಚೆಮಾಡಿ. ಕಾರ್ಯಾತ್ಮಕ ನಳ ಸಂಪರ್ಕ ಬಗ್ಗೆ ರೇಖಾ ನಕ್ಷೆ ಮೂಲಕ ಮಾಹಿತಿ ಪಡೆದುಕೊಂಡು ಗ್ರಾಮ-ಪಂಚಾಯತಿ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಚರ್ಚೆ ಮಾಡಿದರು.

 ಜಿಲ್ಲಾ ಪಂಚಾಯತ ಸಿಇಒ ರಾಹುಲ್ ಶಿಂಧೆ ರವರು ಮಾತನಾಡಿ ಗ್ರಾಮದಲ್ಲಿನ ಕುಡಿಯುವ ನೀರಿನ ಮೂಲಗಳ ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಬೇಕೆಂದು ತಿಳಿಸಿ, ನೀರಿನ ಟ್ಯಾಂಕಗಳ ಸ್ವಚ್ಛತೆ ಬಗ್ಗೆ ಹೆಚ್ಚು ಗಮನ ವಹಿಸಿ ಹಾಗೂ ಜಲ ಜೀವನ ಮಿಷನ್ ಯೋಜನೆಯಡಿ ಬಾಕಿ ಉಳಿದ ಗ್ರಾಮಗಳ ಕಾಮಗಾರಿಗಳನ್ನು ಅತೀ ಶೀಘ್ರದಲ್ಲಿ ಪೂರ್ಣಗೊಳಿಸಿ ಜನರಿಗೆ ನಳ ಸಂಪರ್ಕ ಒದಗಿಸಿ ನೀರು ಕೊಡಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ನಿರ್ದೇಶನ ನೀಡಿದರು. ಡಂಬರಕೊಪ್ಪದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. 

Home add -Advt

 ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್(NRLM) ಯೋಜನೆಯ ಬಗ್ಗೆ ಗ್ರಾಮ ಪಂಚಾಯತಿ ಸಿಬ್ಬಂದಿಯೊಂದಿಗೆ ಪ್ರಗತಿ ಪರಿಶೀಲನೆ ನಡೆಸಿ, ಸಂಘದ ಮಹಿಳೆಯರು  ಕೋಳಿ ಶೆಡ್ ಮಾಡಿಕೊಳ್ಳಲು ಅವಕಾಶ ಇರುವ ಬಗ್ಗೆ ಚರ್ಚಿಸಿ ಕಾಮಗಾರಿಗೆ ಸ್ಥಳ ನಿಗದಿ ಪಡಿಸಲು ತಿಳಿಸಿದರು. 

ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವಿಭಾಗ ಬೆಳಗಾವಿ ಕಾರ್ಯನಿರ್ವಾಹಕ ಅಭಿಯಂತರರು ಕಿರಣ್ ಘೋರ್ಪಡೆ, ಕಾರ್ಯನಿರ್ವಾಹಕ ಅಧಿಕಾರಿ ಮಹೇಶ ಹೂಲಿ, ಸಹಾಯಕ ನಿರ್ದೇಶಕರು ಮಹಮ್ಮದ್ ಗೌಸ್ ರಿಸಲ್ದಾರ್, ಗ್ರಾಮ ಪಂಚಾಯತ ಅಧ್ಯಕ್ಷರು, ಸದಸ್ಯರು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿ ವರ್ಗದವರು  ಹಾಜರಿದ್ದರು.

Related Articles

Back to top button