ಪ್ರಗತಿವಾಹಿನಿ ಸುದ್ದಿ; ಸುಳ್ಯ: ಜಿಲ್ಲಾ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಸರಸ್ವತಿ ಕಾಮತ್ ಮೇಲೆ ಹಲ್ಲೆ ಹಾಗೂ ಅತ್ಯಾಚಾರಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಮಂಡಲ ಸಮಿತಿ ಅಧ್ಯಕ್ಷ, ಬಿಜೆಪಿ ಮುಖಂಡ ಹರೀಶ್ ಕಂಜಿಪಿಲಿಗೆ ನ್ಯಾಯಾಲಯ 2 ವರ್ಷ ಜೈಲುಶಿಕ್ಷೆ ಪ್ರಕಟಿಸಿದೆ.
2014ರ ಲೋಕಸಭಾ ಚುನಾವನೆ ಸಂದರ್ಭದಲ್ಲಿ ಸರಸ್ವತಿ ಕಾಮತ್ ನೆಲ್ಲೂರು ಕೇಮ್ರಾಜೆಯಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದ ಸಂದರ್ಭದಲ್ಲಿ ಹರೀಶ್ ಕಂಜಿಪಿಲಿ ಹಾಗೂ 14 ಜನರ ಗುಂಪು ಸರಸ್ವತಿ ಕಾಮತ್ ಮೇಲೆ ಹಲ್ಲೆ ನಡೆಸಿ ಮಾನಭಂಗಕ್ಕೆ ಯತ್ನಿಸಿದ್ದರು ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿತ್ತು. ಈ ಕುರಿತು ಸರಸ್ವತಿ ಸುಳ್ಯ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಸೆಕ್ಷನ್ 149, 147/149, 341, 506, 504, 323, 354 ಸೆಕ್ಷನ್ ಅಡಿಯಲ್ಲಿ ಆರೋಪ ಸಾಬೀತಾಗಿದ್ದು, ಇದೀಗ ಸುಳ್ಯ ಜೆ ಎಂ ಎಫ್ ಸಿ ನ್ಯಾಯಾಲಯ ಆರೋಪಿಗಳಾದ ಹರೀಶ್ ಕಂಜಿಪಿಲಿ ಹಾಗೂ ಇನ್ನಿತರ ಆರೋಪಿಗಳಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
ತೀರ್ಪಿನ ಪ್ರತಿ ಸಿಕ್ಕಿದ ತಕ್ಷಣ ಮೇಲ್ಮನವಿ ಸಲ್ಲಿಸುವುದಾಗಿ ಹರೀಶ್ ತಿಳಿಸಿದ್ದಾರೆ.
ಭಾರಿ ಮಳೆ, ಮತ್ತೆ ಪ್ರವಾಹ ಭೀತಿ; ಹಲವೆಡೆ ವರುಣನ ಆರ್ಭಟ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ