ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಬೆಳಗಾವಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಆಶಾ ಐಹೊಳೆ ಮತ್ತು ಅವರ ಪತಿ ಪ್ರಶಾಂತ ಐಹೊಳೆ ಮೇಲಿನ ಚೀಟಿಂಗ್ ಪ್ರಕರಣದ ತನಿಖೆ ಮುಂದುವರಿದಿದೆ.
ಬಂಧನಕ್ಕೊಳಗಾಗಿದ್ದ ಪ್ರಶಾಂತ ಐಹೊಳೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ತನಿಖೆಗೆ ಪತಿ-ಪತ್ನಿ ಇಬ್ಬರೂ ಸಹಕರಿಸುತ್ತಿದ್ದಾರೆ ಎಂದು ಎಸ್ಪಿ ಸುಧೀರ್ ರಡ್ಡಿ ಪ್ರಗತಿವಾಹಿನಿಗೆ ತಿಳಿಸಿದ್ದಾರೆ.
ಸಹಕಾರಿ ಬ್ಯಾಂಕ್ ನಲ್ಲಿ ಠೇವಣಿ ಇಟ್ಟವರಿಗೆ ವಂಚಿಸಿದ್ದಾರೆ, ಕಡಿಮೆ ಬೆಲೆಯಲ್ಲಿ ನಿವೇಶನ ಕೊಡುವುದಾಗಿ ವಂಚಿಸಿದ್ದಾರೆ ಎಂದು ಆಸಾ ಮತ್ತು ಪ್ರಶಾಂತ ವಿರುದ್ಧ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಶಾಂತ ಬಂಧಿಸಿದ್ದ ಪೊಲೀಸರು ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.
ಹೆಚ್ಚಿನ ಸುದ್ದಿಗಳಿಗಾಗಿ pragativahini.com ನೋಡಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ