Latest

ಅಕ್ರಮ ಮರಳು ದಂಧೆ ಸರಕಾರದ ಗಮನಕ್ಕೆ ಬಂದಿದೆ -ಸಚಿವ

  ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಅವರ ಪ್ರಶ್ನೆಗೆ ಉತ್ತರ

ಪ್ರಗತಿವಾಹಿನಿ ಕಳೆದವಾರ ಈ ಬಗ್ಗೆ ವಿವರ ವರದಿ ಪ್ರಕಟಿಸಿತ್ತು.

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ರಾಜ್ಯದಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿರುವುದು ಸರಕಾರದ ಗಮನಕ್ಕೆ ಬಂದಿದ್ದು, ಈ ಬಗ್ಗೆ ಸರಕಾರ ಕಠಿಣ ಕ್ರಮ ಕೈಗೊಂಡಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಪಾಟೀಲ ವಿಧಾನ ಪರಿಷತ್ತಿನಲ್ಲಿ ಬುಧವಾರ ತಿಳಿಸಿದ್ದಾರೆ.

ಬಿಜೆಪಿಯ ಮಹಾಂತೇಶ ಕವಟಗಿಮಠ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಅವರು ಎಂ ಸ್ಯಾಂಡ್ ಉತ್ತೇಜಿಸಲು ಸರಕಾರ ಹಲವು ಕ್ರಮ ಕೈಗೊಂಡಿರುವುದಾಗಿಯೂ ತಿಳಿಸಿದ್ದಾರೆ.

ರಾಜ್ಯದ ನದಿ ಪಾತ್ರದಲ್ಲಿರುವ ಮರಳು ಬ್ಲಾಕ್ ಗಳನ್ನು ಸಾರ್ವಜನಿಕ ಟೆಂಡರ್ ಮೂಲಕ ನೀಡಲು ಅವಕಾಶ ಕಲ್ಪಿಸಲಾಗಿದೆ. ಪ್ರಸ್ತುತ 216 ಮರಳು ಬ್ಲಾಕ್ ಗಳನ್ನು ಟೆಂಡರ್ ಮೂಲಕ ಗುತ್ತಿಗೆ ನೀಡಲಾಗಿದೆ. 
ವಿದೇಶಿ ಮರಳು ಆಮದಿಗೂ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. 

ಎಂ ಸ್ಯಾಂಡ್ ಉತ್ತೇಜಿಸಲು ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ 288 ಎಂ ಸ್ಯಾಂಡ್ ಉತ್ಪಾದನೆ ಘಟಕ ಕಾರ್ಯ ನಿರ್ವಹಿಸುತ್ತಿದ್ದು, ವಾರ್ಷಿಕ 27 ದಶಲಕ್ಷ ಮೆಟ್ರಿಕ್ ಟನ್ ಮರಳನ್ನು ಎಂ ಸ್ಯಾಂಡ್ ಉತ್ಪಾದನೆ ಮಾಡಿ ಪೂರೈಸಲಾಗಿದೆ ಎಂದೂ ಅವರು ಹೇಳಿದ್ದಾರೆ. 

ರಾತ್ರಿವೇಳೆಯಲ್ಲಿ ಅಕ್ರಮ ಮರಳು ಸಾಗಾಣಿಕೆ ನಡೆಯುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ. ಅನಧಿಕೃತ ಮರಳು ಚಟುವಟಿಕೆ ನಿಯಂತ್ರಿಸಲು ಕಾಯ್ದೆ ತಿದ್ದುಪಡಿ ತರಲಾಗಿದೆ. ಈವರೆಗೆ ಇಂತಹ 14 ಪ್ರಕರಣಗಳು ದಾಖಲಾಗಿವೆ ಎಂದು ಪಾಟೀಲ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button