Latest
ಅತೃಪ್ತ ಶಾಸಕರ ಅನರ್ಹತೆಗೆ ಮನವಿ – ಸಿದ್ದರಾಮಯ್ಯ
ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ
ನಾಲ್ವರು ಶಾಸಕರನ್ನು ಅನರ್ಹಗೊಳಿಸುವಂತೆ ಸ್ಪೀಕರ್ ಗೆ ಮನವಿ ಮಾಡಲಾಗುವುದು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು,
ರಮೇಶ್ ಜಾರಕಿಹೊಳಿ, ನಾಗೇಂದ್ರ, ಮಹೇಶ್ ಕುಮಠಳ್ಳಿ ಹಾಗೂ ಉಮೇಶ ಜಾಧವ ಅವರ ವಿರುದ್ಧ ದೂರು ನೀಡಲಾಗುವುದು ಎಂದರು.
ಸಾಕಷ್ಟು ಬಾರಿ ನೋಟೀಸ್ ನೀಡಿದರೂ ಅವರು ತಮ್ಮ ವರ್ತನೆ ತಿದ್ದಿಕೊಂಡಿಲ್ಲ. ವಯಕ್ತಿವಾಗಿ ಬಂದು ಸ್ಪಷ್ಟೀಕರಣ ನೀಡುವಂತೆ ತಿಳಿಸಿದರೂ ಬಂದಿಲ್ಲ. ಹಾಗಾಗಿ ಅವರ ವಿರುದ್ಧ ಕ್ರಮಕ್ಕೆ ನಿರ್ಧರಿಸಲಾಗಿದೆ ಎಂದರು.




