Latest

ಅಮೇಥಿಯಲ್ಲಿ ಸೃತಿ ಇರಾನಿ ಆಪ್ತನ ಬರ್ಬರ ಹತ್ಯೆ

ಪ್ರಗತಿವಾಹಿನಿ ಸುದ್ದಿ, ಅಮೇಥಿ:

ಅಮೇಥಿಯಲ್ಲಿ ಎಐಸಿಸಿ ಅಧ್ಯಕ್ಷ, ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ವಿರುದ್ಧ ಭರ್ಜರಿ ಜಯ ದಾಖಲಿಸಿದ ಸ್ಮೃತಿ ಇರಾನಿ ಅವರ ಆಪ್ತರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಸಂಸತ್ ನ ಸೆಂಟ್ರಲ್ ಹಾಲ್ ನಲ್ಲಿ ನರೇಂದ್ರ ಮೋದಿ ಅವರನ್ನು ನೂತನ ಸಂಸದೀಯ ನಾಯಕರನ್ನಾಗಿ ಆಯ್ಕೆ ಮಾಡುವ ಸಮಾರಂಭ, ಸಂಭ್ರಮದಲ್ಲಿ ಸ್ಮೃತಿ ಇದ್ದರು. ಇತ್ತ ಅವರ ಕ್ಷೇತ್ರದಲ್ಲಿ ಅವರ ಆಪ್ತ ಬೆಂಬಲಿಗ ಸುರೇಂದ್ರ ಸಿಂಗ್ ರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಅಮೇಥಿಯ ಬರುಲಿಯಾ ಗ್ರಾಮದ ತಮ್ಮ ಮನೆಯಲ್ಲಿ ಶನಿವಾರ ರಾತ್ರಿ ವಿಶ್ರಾಂತಿ ಪಡೆಯುತ್ತಿದ್ದ ಸುರೇಂದ್ರ ಸಿಂಗ್ ಮೇಲೆ ದುಷ್ಕರ್ಮಿಗಳು ಏಕಾಏಕಿ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ದುಷ್ಕರ್ಮಿಗಳ ಗುಂಡೇಟು ತಿಂದು ರಕ್ತದ ಮಡಿಲಿನಲ್ಲಿ ಮಲಗಿದ್ದ ಸುರೇಂದ್ರ ಅವರನ್ನು ಲಕ್ನೋಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುವ ಪ್ರಯತ್ನ ಕೂಡಾ ವಿಫಲವಾಗಿದೆ. ಘಟನೆ ಸಂಬಂಧ ಇಬ್ಬರನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿದೆ.

ಬರುಲಿಯಾ ಗ್ರಾಮದ ಮಾಜಿ ಮುಖ್ಯಸ್ಥರಾಗಿದ್ದ ಸುರೇಂದ್ರ ಅವರ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿರುವ ಜಮೋ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

2019ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರನ್ನು 55,120 ಮತಗಳ ಅಂತರದಿಂದ ಸ್ಮೃತಿ ಇರಾನಿ ಸೋಲಿಸಿ ಹೊಸ ಇತಿಹಾಸ ಬರೆದಿದ್ದನ್ನು ಇಲ್ಲಿ ಸ್ಮರಿಸಬಹುದು.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button