Latest

ಆಡಿಯೋ ಎಲ್ಲ ನಕಲಿ, ನಾನು ಯಾರೊಂದಿಗೂ ಮಾತನಾಡಿಲ್ಲ ಎಂದ ಯಡಿಯೂರಪ್ಪ

ಸಾಬೀತಾದರೆ ನಾನು ರಾಜಕೀಯದಿಂದಲೇ ನಿವೃತ್ತನಾಗುತ್ತೇನೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ನಾನು ನಿನ್ನೆ ದೇವದುರ್ಗಕ್ಕೆ ದೇವಸ್ಥಾನಕ್ಕೆ ಹೋಗಿ ವಾಪಸ್ ಬಂದಿದ್ದೇನೆ. ಅಲ್ಲಿ ಯಾರೊಂದಿಗೂ ರಾಜಕೀಯ ಮಾತನಾಡಿಲ್ಲ. ಕುಮಾರಸ್ವಾಮಿ ಬಿಡುಗಡೆ ಮಾಡಿರುವ ದಾಖಲೆ ಸಂಪೂರ್ಣ ನಕಲಿ. ಅದರಲ್ಲಿ ಸತ್ಯಾಂಶವಿಲ್ಲ. ಇದು ಸಾಬೀತಾದರೆ ನಾನು ರಾಜಕೀಯದಿಂದಲೇ ನಿವೃತ್ತನಾಗುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

Home add -Advt

ಕುಮಾರಸ್ವಾಮಿ ಅವರೇ ನಮ್ಮ ಶಾಸಕ ಸುಭಾಷ ಗುತ್ತೇದಾರ ಅವರಿಗೆ ಆಮಿಷ ಒಡ್ಡಿದ್ದಾರೆ. ನಾವು ಅಂತಹ ಯಾವುದೇ ಕೆಲಸ ಮಾಡುತ್ತಿಲ್ಲ. ಇದು ಸತ್ಯವಾದರೆ ನಾನು ಶಾಸಕ ಸ್ಥಾನವಷ್ಟೆ ಅಲ್ಲ, ರಾಜಕೀಯದಿಂದಲೇ ನಿವೃತ್ತನಾಗುತ್ತೇನೆ ಎಂದರು.

ಆದರೆ ಈ ಬಗ್ಗೆ ತನಿಖೆಗೆ ಒತ್ತಾಯಿಸುತ್ತೀರಾ ಎನ್ನುವ ಪ್ರಶ್ನೆಗೆ ಸಮರ್ಪಕ ಉತ್ತರ ನೀಡಲಿಲ್ಲ. 

Related Articles

Back to top button