Belagavi NewsBelgaum NewsKannada NewsKarnataka NewsNational
*ಇಬ್ಬರು ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ಬೆಳಗಾವಿ ಜಿಲ್ಲೆಯ ಇಬ್ಬರು ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಶಾಕ್ ಕೊಟ್ಟಿದ್ದಾರೆ
ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಬೆಳಗಾವಿ ಲೋಕಾಯುಕ್ತ ಎಸ್ ಪಿ ಹಣಮಂತರಾಯ ನೇತೃತ್ವದಲ್ಲಿ ಇಬ್ಬರು ಅಧಿಕಾರಿಗಳ ಮೇಲೆ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಬೆಳಗಾವಿ ಉತ್ತರ ಸಬ್ ರಿಜಿಸ್ಟರ್ ಸಚೀನ ಮಂಡೇದ, ರಾಯಬಾಗ ತಾಲೂಕಿನ ಕವಟಕೊಪ್ಪದ ಪಶುವೈದ್ಯ ಸಂಜಯ ದುರ್ಗನ್ನವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ಆನಗೋಳ, ಹಾರುಗೇರಿ, ಬೆಲ್ಲದ ಬಾಗೇವಾಡಿ ಸೇರಿ ಮೂರು ಕಡೆಗಳಲ್ಲಿ ದಾಳಿ ನಡೆಸಲಾಗಿದೆ.
ಹಾರೂಗೇರಿ ವೆಟರ್ನರಿ ಇನ್ಸ್ಪೆಕ್ಟರ್ ಸಂಜಯ್ ಅವರ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ.




