Kannada NewsLatest

ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳಿಗೆ ಸ್ಪಂದನೆ -ಬಾಲಚಂದ್ರ ಜಾರಕಿಹೊಳಿ ಆಶಯ

ಪ್ರಗತಿವಾಹಿನಿ ಸುದ್ದಿ, ಗೋಕಾಕ :

ಬೆಳಗಾವಿ ಸಂಸದ ಸುರೇಶ ಅಂಗಡಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಸ್ಥಾನ ದೊರೆತಿರುವುದಕ್ಕೆ ಅರಭಾವಿ ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

Home add -Advt

ಸುರೇಶ ಅಂಗಡಿ ಹಾಗೂ ಪ್ರಲ್ಹಾದ ಜೋಶಿ ಅವರು ಸಚಿವರಾಗಿರುವುದರಿಂದ ಉತ್ತರ ಕರ್ನಾಟಕಕ್ಕೆ ಹೆಮ್ಮೆಯಾಗಿದೆ. ಇದರಿಂದ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳಿಗೆ ನೂತನ ಸಚಿವರು ಸ್ಪಂದಿಸುವರೆಂಬ ಆಶಾಭಾವನೆ ಹೊಂದಿದ್ದೇವೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಕೇಂದ್ರದಲ್ಲಿ ಸಚಿವರಾಗುವುದು ಖಾತ್ರಿಯಾಗುತ್ತಿದ್ದಂತೆಯೇ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸದಾನಂದಗೌಡ, ಪ್ರಲ್ಹಾದ ಜೋಶಿ ಹಾಗೂ ಸುರೇಶ ಅಂಗಡಿ ಅವರಿಗೆ ದೂರವಾಣಿ ಕರೆ ಮಾಡಿ ಶುಭಾಷಯ ತಿಳಿಸಿ ಅಭಿನಂದಿಸಿದರು.
ಸತತ ೨ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ನರೇಂದ್ರ ಮೋದಿ ಅವರಿಂದ ಭಾರತಕ್ಕೆ ವಿಶ್ವ ಮಟ್ಟದಲ್ಲಿ ಹೆಸರಾಗಲಿದೆ. ಭಾರತದ ಶಕ್ತಿ ಏನೆಂಬುದನ್ನು ಮೋದಿ ಅವರು ಜಗತ್ತಿಗೆ ತಿಳಿಸಿಕೊಡಲಿದ್ದಾರೆ. ಭಾರತದ ಶಕ್ತಿ ಸಾಮರ್ಥ್ಯ ಇನ್ನೈದು ವರ್ಷದಲ್ಲಿ ಬದಲಾಗಲಿದ್ದು, ಭಾರತ ವಿಶ್ವದಲ್ಲಿ ಪ್ರಬಲ ರಾಷ್ಟ್ರವಾಗಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ.

Related Articles

Back to top button