ಕಂದಕಕ್ಕೆ ಉರುಳಿದ ಬಸ್; 15 ಜನರಿಗೆ ಗಂಭೀರ ಗಾಯ

ಪ್ರಗತಿವಾಹಿನಿ ಸುದ್ದಿ; ರಾಯಗಢ: ಖಾಸಗಿ ಬಸ್ ಒಂದು ಕಂದಕಕ್ಕೆ ಉರುಳಿದ ಪರಿಣಾಮ ಬಾಲಕನೋರ್ವ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢದಲ್ಲಿ ನಡೆದಿದೆ.

ಮುಂಜಾನೆ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬಸ್ ನಲ್ಲಿ 30 ಜನರು ಪ್ರಯಾಣಿಸುತ್ತಿದ್ದು, ರಾಯಗಢದ ಕಾಶೆಡಿ ಘಾಟ್ ನ ಕಣಿವೆ ಬಸ್ ಉರುಳಿಬಿದ್ದಿದೆ. ಘಟನೆಯಲ್ಲಿ 8 ವರ್ಷದ ಬಾಲಕ ಸಾಯಿ ರಾಣೆ ಮೃತಪಟ್ಟಿದ್ದು, 15 ಜನರು ಗಾಯಗೊಂಡಿದ್ದಾರೆ.

ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ರಕ್ಷಣಾ ಕಾರ್ಯ ಕೈಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button