ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಕಬ್ಬಿನ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗುರುವಾರ ಬೆಂಗಳೂರಿನಲ್ಲಿ ಸಕ್ಕರೆ ಕಾರ್ಖಾನೆಗಳ ಚೇರಮನ್ ರ ಸಭೆ ಕರೆದಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರು, ಸಚಿವರೇ ಸಕ್ಕರೆ ಕಾರ್ಖಾನೆಗಳ ಮಾಲಿಕರಾಗಿರುವುದರಿಂದ ಸಭೆ ಕುತೂಹಲ ಕೆರಳಿಸಿದ್ದು, ಸರಕಾರ ರೈತರ ಪರ ನಿಲ್ಲುವುದೋ, ಕಾರ್ಖಾನೆಗಳ ಪರ ನಿಲ್ಲುವುದೋ ಎನ್ನುವುದು ಕುತೂಹಲ ಮೂಡಿಸಿದೆ.
ಈ ಮಧ್ಯೆ ಸಕ್ಕರೆ ಕಾರ್ಖಾನೆಯ ಮಾಲಿಕರೂ ಆಗಿರುವ ಸಚಿವ ರಮೇಶ ಜಾರಕಿಹೊಳಿ ಕಾಂಗ್ರೆಸ್-ಜೆಡಿಎಸ್ ಸಮನ್ವಯ ಸಮಿತಿ ನಾಯಕ ಸಿದ್ದರಾಮಯ್ಯ ಅವರನ್ನು ಗುಪ್ತವಾಗಿ ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ.
ಬೆಳಗಾವಿಯಲ್ಲಿ ವಿಧಾನಮಂಡಳದ ಅಧಿವೇಶನ ನಡೆಯುವ ದಿನ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಕಬ್ಬೇ ಸರಕಾರವನ್ನು ಅರೆಯಲಿದೆಯೇ ಎನ್ನುವ ಶಂಕೆ ಕೂಡ ವ್ಯಕ್ತವಾಗಿದೆ.
ಇದರ ಜೊತೆಗೆ ಬಿಜೆಪಿ ಬೆಳಗಾವಿ ಅಧಿವೇಶನದ ಮೊದಲ ದಿನವೇ ಕಬ್ಬು ಬೆಳೆಗಾರರ ಬೃಹತ್ ಸಮಾವೇಶ ಹಮ್ಮಿಕೊಂಡಿರುವುದು ಕೂಡ ಸರಕಾರಕ್ಕೆ ಇಕ್ಕಟ್ಟು ತಂದಿಟ್ಟಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ