Latest

ಕನಕ ವೃತ್ತ ಅಭಿವೃದ್ಧಿಗೆ 20 ಲಕ್ಷ ರೂ. ಅನುದಾನ -ಕುರೇರ

ಸಮಾನತೆಯ ಸಂದೇಶ ಸಾರಿದ ಕನಕದಾಸರು : ಆಶಾ ಐಹೊಳೆ

   ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಕನಕದಾಸರು ಭಕ್ತಿರಸದಿಂದ ರಚಿಸಿರುವ ಲೇಖನ, ಕಾವ್ಯ, ಕೀರ್ತನೆಗಳಿಂದ ಸಮಾಜಕ್ಕೆ ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ ಅವರು ಹೇಳಿದರು.
ಕುಮಾರ ಗಂಧರ್ವ ರಂಗಮಂದಿರದಲ್ಲಿ ಶ್ರೀ ಭಕ್ತ ಕನಕದಾಸರ ಜಯಂತಿ ಉತ್ಸವವನ್ನುಉದ್ಘಾಟಿಸಿ ಅವರು ಮಾತನಾಡಿ, ಕನಕದಾಸರು ತಮ್ಮ ಕೀರ್ತನೆಯ ಮೂಲಕ ಸಮಾಜ ಸುಧಾರಣೆ ಮಾಡಿದವರು. ಅವರ ಕೀರ್ತನೆಯು ಸಮಾಜಕ್ಕೆ ದಾರಿ ದೀಪವಾಗಿದೆ ಎಂದರು.
ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್ ಆರ್ ಮಾತನಾಡಿ, ನೂರು ವರ್ಷಗಳ ಕಾಲ ಬದುಕಿದ ಕನಕದಾಸರು ಸಾವಿರಾರು ವರ್ಷಕ್ಕೆ ಆಗುವಷ್ಟು ಸಂದೇಶವನ್ನು ನೀಡಿ ಹೋಗಿದ್ದಾರೆ. ಅವರು ನೀಡಿದ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಪ್ರಭಾರ ಅಪರ ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಶಶಿಧರ ಕುರೇರ ಮಾತನಾಡಿ, ಶ್ರೇಷ್ಠ ದಾಸರನ್ನು ಗುರುತಿಸುವ ಕಾರ್ಯವಾಗಬೇಕು ಎಂದು ಸಾರ್ವಜನಿಕರು ಮತ್ತು ಪಾಲಕೆ ಸದಸ್ಯರು ಬೇಡಿಕೆ ಇಟ್ಟಿದ್ದರು. ಇದರ ಹಿನ್ನೆಲೆಯಲ್ಲಿ ಕನಕ ವೃತ್ತವನ್ನು ಅಭಿವೃದ್ಧಿ ಪಡಿಸಿ ಪುತ್ಥಳಿ ಅನಾವರಣಗೊಳಿಸಲು ಮಹಾನಗರ ಪಾಲಿಕೆ ಪರಿಷತ್‌ನಲ್ಲಿ ಒಪ್ಪಿಸಲಾಗಿದ್ದು, ೨೦ ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದರು.
ಮಹಾಪೌರ ಬಸಪ್ಪಾ ಚಿಕ್ಕಲದಿನ್ನಿ, ಉಪಮಹಾಪೌರ ಮಧುಶ್ರೀ ಪೂಜಾರಿ, ಮಾಜಿ ಮಹಾಪೌರ ಯಲ್ಲಪ್ಪಾ ಕುರುಬರ, ನಗರ ಸೇವಕರು, ಡಿಸಿಪಿ ಮಹಾನಿಂಗ ನಂದಗಾವಿ, ಉಪವಿಭಾಗಾಧಿಕಾರಿ ಕವಿತಾ ಯೋಗಪ್ಪನವರ, ತಹಶಿಲ್ದಾರ ಮಂಜುಳಾ ನಾಯಕ ಉಪಸ್ಥಿತರಿದ್ದರು.
ನಿವೃತ್ತ ಅಧಿಕಾರಿ ಎಸ್.ಯು. ಜಮಾದಾರ ಅವರು ನಿರೂಪಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀಶೈಲ ಕರಿಶಂಕರಿ ಸ್ವಾಗತಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button