ಪ್ರಗತಿವಾಹಿನಿ ಸುದ್ದಿ, ಚನ್ನಮ್ಮ ಕಿತ್ತೂರು:
ಪಟ್ಟಣದ ವಿವಿಧೆಡೆ ಬುಧವಾರ ಸಂಜೆ ಉತ್ತಮ ಮಳೆಯಾಗಿದೆ. ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ.

ಮಳೆಯೊಂದಿಗೆ ಬೀಸಿದ ಬಿರುಗಾಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿತ್ತು. ವಿದ್ಯಾಗಿರಿ ಪ್ರದೇಶದಲ್ಲಿ ಗಾಳಿ, ಮಳೆ, ಸಿಡಿಲು ಅರ್ಭಟ ಜೋರಾಗಿತ್ತು. ಇದೇ ವೇಳೆ ಕಿತ್ತೂರಿನ 3 ಕಡೆ ತೆಂಗಿನ ಗಿಡಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿದೆ.