ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ನೂತನವಾಗಿ ಚಿನ್ನದ ರಥ ನಿರ್ಮಿಸಿ, ಅರ್ಪಿಸುವ ಕುರಿತಂತೆ ಮಾಧ್ಯಮಗಳಲ್ಲಿ ವಿಭಿನ್ನ ವರದಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಸರಕಾರ ಸ್ಪಷ್ಟನೆ ನೀಡಿದೆ.
• ಈ ಯೋಜನೆಗೆ 2005 ರಲ್ಲಿಯೇ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಅಂದಿನ ದಿನಗಳಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಈ ಚಿನ್ನದ ರಥ ನಿರ್ಮಿಸಲು ಉದ್ದೇಶಿಸಲಾಗಿತ್ತು.
• ಇದಕ್ಕಾಗಿ ದೇವಾಲಯದಲ್ಲಿ ಲಭ್ಯವಿರುವ ಚಿನ್ನ ಬಳಸಿಕೊಂಡು ಉಳಿದ ಚಿನ್ನವನ್ನು ಬ್ಯಾಂಕಿನ ಮೂಲಕ ಖರೀದಿಸಲು ಸರ್ಕಾರ ಅನುಮೋದನೆ ನೀಡಿತ್ತು.
• ಈ ಆದೇಶಗಳಲ್ಲಿ ರಥ ನಿರ್ಮಾಣಕ್ಕೆ ಸರ್ಕಾರದ ಅನುದಾನ ಬಳಸದೆ, ಸಾರ್ವಜನಿಕರ ದೇಣಿಗೆ ಸಂಗ್ರಹ ಹಾಗೂ ದೇವಾಲಯದ ಸಂಪನ್ಮೂಲಗಳಿಂದಲೇ ರಥ ನಿರ್ಮಾಣ ವೆಚ್ಚ ಭರಿಸುವಂತೆ ತಿಳಿಸಲಾಗಿದೆ.
• ಇತ್ತೀಚೆಗೆ ಶ್ರೀ ಕ್ಷೇತ್ರದ ಭಕ್ತರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಹಿಂದಿನ ಸರ್ಕಾರಿ ಆದೇಶಗಳನ್ನು ಹಾಜರುಪಡಿಸಿ, ನನೆಗುದಿಗೆ ಬಿದ್ದಿರುವ ಈ ಯೋಜನೆಯನ್ನು ಪುನರಾರಂಭಿಸುವಂತೆ ಮನವಿ ಮಾಡಿದ್ದಾರೆ.
• ಈ ನಿಟ್ಟಿನಲ್ಲಿ ಇಂದಿನ ಮಾರುಕಟ್ಟೆ ದರದಲ್ಲಿ ಚಿನ್ನದ ಬೆಲೆ, ನಿರ್ಮಾಣ ವೆಚ್ಚ ಎಲ್ಲ ಅಂದಾಜುಗಳನ್ನೂ ಪರಿಷ್ಕರಿಸಿ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ
ಇದಕ್ಕೆ ಸಂಬಂಧಿಸಿದಂತೆ 2005 ಹಾಗೂ 2006 ರಲ್ಲಿ ಹೊರಡಿಸಿದ ಸರ್ಕಾರಿ ಆದೇಶ ಇಲ್ಲಿದೆ.
