Latest

ಕೆಎಂಎಫ್ ಅಧ್ಯಕ್ಷರಾಗಿ ವಿವೇಕರಾವ ಪಾಟೀಲ ಪುನರಾಯ್ಕೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ವಿವೇಕರಾವ ಪಾಟೀಲ ಬೆಳಗಾವಿ ಜಿಲ್ಲಾ ಕೆಎಂಎಫ್ ಅಧ್ಯಕ್ಷರಾಗಿ ಎರಡನೆಯ ಬಾರಿಗೆ ಅವಿರೋಧವಾಗಿ ಆಯ್ಕೆಯಾದರು.
ಶುಕ್ರವಾರ ಬೆಳಗ್ಗೆ ೧೦ ರಿಂದ ೧೨ ರವರೆಗೆ ನಡೆದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯ ನಂತರ ವಿವೇಕರಾವ ಪಾಟೀಲ ಅವಿರೋಧವಾಗಿ ಆಯ್ಕೆಯಾಗಿರುವುದನ್ನು ಘೋಷಿಸಲಾಯಿತು.
ಮಾಜಿ ಸಚಿವ, ಶಾಸಕ ಬಾಲಚಂದ್ರ ಜಾರಕಿಹೊಳಿ ಸಂಪೂರ್ಣ ಕೆಎಂಎಫ್ ಚುನಾವಣೆಯ ಉಸ್ತುವಾರಿ ವಹಿಸಿ, ತಮ್ಮದೇ ಗುಂಪು ಪುನರಾಯ್ಕೆಯಾಗುವಂತೆ ನೋಡಿಕೊಂಡಿದ್ದಾರೆ.
ಮಾಜಿ ಸಚಿವ ರಮೇಶ ಜಾರಕಿಹೊಳಿ ಪುತ್ರ ಕೂಡ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. 

Related Articles

Related Articles

Back to top button