Video Player
00:00
00:00
ಪ್ರಗತಿವಾಹಿನಿ ಸುದ್ದಿ, ಖಾನಾಪುರ:
ಖಾನಾಪುರ ಪಟ್ಟಣದಲ್ಲಿ ಸೋಮವಾರ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಟೊಪ್ಪಿಗೆ ಚಳುವಳಿ ಮತ್ತು ದೇಸೀ ಉಡುಗೆಯಲ್ಲಿ ಕಾಲ್ನಡಿಗೆ ಜಾಥಾ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಪಂ ಇಒ ಲಕ್ಷ್ಮಣರಾವ್ ಯಕ್ಕುಂಡಿ ನೇತೃತ್ವದಲ್ಲಿ ನಡೆದ ಜಾಥಾದಲ್ಲಿ ತಹಸೀಲ್ದಾರ್ ವಿದ್ಯಾಧರ ಗುಳಗುಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಇದ್ದರು.
ಖಾನಾಪುರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆದು ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು.
(ಪ್ರಗತಿವಾಹಿನಿ ಸುದ್ದಿಗಳನ್ನು ಎಲ್ಲರಿಗೂ ಶೇರ್ ಮಾಡಿ)