Belagavi NewsBelgaum NewsKannada NewsKarnataka NewsNationalPolitics

*ಗೋಕಾಕ ಸೇರಿದಂತೆ 103 ರೈಲ್ವೆ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ಅಮೃತ ಭಾರತ ನಿಲ್ದಾಣ ಯೋಜನೆಯ ಭಾಗವಾಗಿ ಪುನರಾಭಿವೃದ್ಧಿಗೊಂಡಿರುವ ರೈಲ್ವೆ ನಿಲ್ದಾಣಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವರ್ಚ್ಯೂಲ್ ಮೂಲಕ ಉದ್ಘಾಟಿಸಿದರು

ಇಂದು ಬೆಳಗಾವಿ ಜಿಲ್ಲೆಯ ಗೋಕಾಕ ರೈಲ್ವೆ ನಿಲ್ದಾಣ ಸೇರಿದಂತೆ 103 ರೈಲ್ವೆ ನಿಲ್ದಾಣಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಡಿಸಿದರು. 

Related Articles

18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 86 ಜಿಲ್ಲೆಗಳಲ್ಲಿರುವ ನಿಲ್ದಾಣಗಳನ್ನು ಉದ್ಘಾಟಿಸಿದ್ದಾರೆ.ಈ ಉಪಕ್ರಮವು 1,300 ಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಸುಧಾರಿತ ಸೌಕರ್ಯಗಳು ಮತ್ತು ಪ್ರಾದೇಶಿಕ ವಾಸ್ತುಶಿಲ್ಪದ ವಿನ್ಯಾಸಗಳೊಂದಿಗೆ ಆಧುನಿಕ ಸಾರಿಗೆ ಕೇಂದ್ರಗಳಾಗಿ ಪರಿವರ್ತಿಸುವ ಮೂಲಕ ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಗುರಿಯನ್ನು ಹೊಂದಿದೆ. 

ಈ 103 ನಿಲ್ದಾಣಗಳ ನವೀಕರಣಕ್ಕೆ ಸುಮಾರು 1,100 ಕೋಟಿ ರೂ. ವೆಚ್ಚವಾಗಿದ್ದು, ಕರ್ನಾಟಕ, ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಗುಜರಾತ್ ಮತ್ತು ಇತರ ರಾಜ್ಯಗಳ ನಿಲ್ದಾಣಗಳು ಸೇರಿವೆ.

Home add -Advt

Related Articles

Back to top button