ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಖಾತೆ ಹಂಚಿಕೆ ಮುನ್ನವೇ ಜಿಲ್ಲೆಯಲ್ಲಿ ಪ್ರವಾಸ ಆರಂಭಿಸಿರುವ ಸಚಿವ ಸತೀಶ ಜಾರಕಿಹೊಳಿ ಎರಡು ದಿನ ಬೆಳಗಾವಿಯಲ್ಲಿ ಸಭೆ ನಡೆಸಿ, ಸಾರ್ವಜನಿಕರ ಅಹವಾಲು ಆಲಿಸಿದ ನಂತರ ಗುರುವಾರ ಅಥಣಿಗೆ ಭೇಟಿ ನೀಡಲಿದ್ದಾರೆ.
ಗುರುವಾರ ಬೆಳಗ್ಗೆ 11 ಗಂಟೆಗೆ ಅಥಣಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ. 28 ರಂದು ಮಧ್ಯಾಹ್ನ 12 ಗಂಟೆವರೆಗೆ ಬೆಳಗಾವಿಯಲ್ಲಿ ಇರುವ ಸತೀಶ್, ಮಧ್ಯಾಹ್ನ 1 ಗಂಟೆಗೆ ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮದಲ್ಲಿ ಅಹವಾಲು ಆಲಿಸುವರು.
ಖಾತೆ ಹಂಚಿಕೆ ಬಿಕ್ಕಟ್ಟು ಇನ್ನೂ ಬಗೆಹರಿಯದಿರುವ ಹಿನ್ನೆಲೆಯಲ್ಲಿ ಸತೀಶ್ ಸಧ್ಯಕ್ಕೆ ಖಾತೆ ರಹಿತ ಸಚಿವರಾಗಿದ್ದಾರೆ, ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನೂ ಇನ್ನೂ ಪ್ರಕಟಿಸಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ