ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಜನೇವರಿ 12 ಹಾಗೂ 13 ರಂದು ಎರಡು ದಿನಗಳ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವವನ್ನು ಬೈಲಹೊಂಗಲ ತಾಲೂಕಿನ ಸಂಗೊಳ್ಳಿಯಲ್ಲಿ ಏರ್ಪಡಿಸಲಾಗಿದೆ.
ರಾಜ್ಯ ಅರಣ್ಯ ಮತ್ತು ಪರಿಸರ ಸಚಿವ ಸತೀಶ ಜಾರಕಿಹೊಳಿ 12 ರಂದು ಸಂಗೊಳ್ಳಿ ಪ್ರೌಢಶಾಲೆ ಆವರಣದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೇದಿಕೆಯಲ್ಲಿ ಕಾರ್ಯಕ್ರಮ ಉದ್ಘಾಟಿಸುವರು.
ಶಾಸಕ ಮಹಾಂತೇಶ ಎಸ್. ಕೌಜಲಗಿ ಅಧ್ಯಕ್ಷತೆ ವಹಿಸುವವರು. ಸಂಗೊಳ್ಳಿಯ ಶ್ರೀ ಗುರು ಸಿದ್ಧಲಿಂಗೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಕೇಂದ್ರ ಸರ್ಕಾರದ ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯಮಶೀಲತೆ ರಾಜ್ಯ ಸಚಿವರಾದ ಅನಂತ ಕುಮಾರ ಹೆಗಡೆ ಉಪಸ್ಥಿತರಿರುವರು.
ರಾಜ್ಯ ಬೃಹತ್ ನೀರಾವರಿ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಡಿ.ಕೆ. ಶಿವಕುಮಾರ, ಪ್ರವಾಸೋಧ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ. ಮಹೇಶ, ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ, ಚಿಕ್ಕೋಡಿ-ಸದಲಗಾ ಶಾಸಕರಾದ ಗಣೇಶ ಪ್ರಕಾಶ ಹುಕ್ಕೇರಿ, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಆಶಾ ಐಹೋಳೆ ಮೊದಲಾದವರನ್ನು ಆಹ್ವಾನಿಸಲಾಗಿದೆ.
ಬೆಳಿಗ್ಗೆ 10ಕ್ಕೆ ಕಿತ್ತೂರು ಸಂಸ್ಥಾನದ ಧ್ವಜಾರೋಹಣ, ರಾಯಣ್ಣ ಪ್ರತಿಮೆಗೆ ಮಾರ್ಲಾಪಣೆ ಬಳಿಕ ಸಂಗೊಳ್ಳಿ ರಾಯಣ್ಣ ಜ್ಯೋತಿಯನ್ನು ಬರಮಾಡಿಕೊಳ್ಳಲಾಗುವುದು. 10.30ಕ್ಕೆ ಜಾನಪದ ಕಲಾವಾಹಿನಿಗೆ ಚಾಲನೆ ನೀಡಲಗುವುದು. 11ಕ್ಕೆ ಲೋಕಸಭಾ ಸದಸ್ಯ ಸುರೇಶ ಅಂಗಡಿ ಅವರು ವಸ್ತು ಪ್ರದರ್ಶನ ಉದ್ಘಾಟಿಸುವರು. ಉತ್ಸವದ ಅಂಗವಾಗಿ ಈ ಎರಡೂ ದಿನ ಸಂಜೆ 5 ರಿಂದ ರಾತ್ರಿ 1 ಗಂಟೆಯವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ