
ಪ್ರಗತಿವಾಹಿನಿ ಸುದ್ದಿ: ವರನಟ ಡಾ.ರಾಜ್ಕುಮಾರ್ ಸಂಬಂಧಿಯೊಬ್ಬರ ಮನೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ. ಘಟನೆಯಿಂದಾಗಿ ಮನೆಯ ಕಿಟಕಿ ಗಾಜುಗಳು ಪುಡಿ ಪುಡಿಯಾಗಿವೆ.
ತಮಿಳುನಾಡಿನ ದೊಡ್ಡ ಗಾಜನೂರಿನಲ್ಲಿರುವ ಮಂಗಳಮ್ಮ ಎಂಬವರ ಮನೆ ಮುಂದೆ ಭೀಕರ ಸ್ಫೋಟ ಸಂಭವಿಸಿದೆ. ಸ್ಫೋಟದ ರಭಸಕ್ಕೆ ಮನೆಯ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ.
ಯಾರೋ ಕಿಡಿಗೇಡಿಗಳು ಕಚ್ಚಾ ಬಾಂಬ್ ಅಥವಾ ಪಟಾಕಿ ಆಟಂಬಾಂಬ್ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ತಾಳವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಸ್ಥಳದಲ್ಲಿ ಬಿದ್ದಿರುವ ಅವಶೇಷ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದಾರೆ. ಇದು ಕಚ್ಚಾಬಾಂಬೋ ಅಥವಾ ಪಟಾಕಿ ಸ್ಫೋಟವೇ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.



