ಪ್ರಗತಿವಾಹಿನಿ ಸುದ್ದಿ, ನವದೆಹಲಿ
ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಬಿಜೆಪಿ ಹಿರಿಯ ನಾಯಕ, ಕೇಂದ್ರದ ಸಚಿವ ಅರುಣ ಜೇಟ್ಲಿ ಅವರನ್ನು ಲಂಡನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
66 ವಯಸ್ಸಿನ ಜೇಟ್ಲಿ ಆರೋಗ್ಯ ಕಳೆದ 6-8 ತಿಂಗಳಿನಿಂದಲೂ ತೀವ್ರವಾಗಿ ಹದಗೆಟ್ಟಿದ್ದು, 2-3 ಬಾರಿ ವಿದೇಶದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರ ಮಗನ ವಿವಾಹವನ್ನು ತುರ್ತಾಗಿ (ಜೂನ್ 4) ನಡೆಸಲು ನಿರ್ಧರಿಸಲಾಗಿದೆ ಎನ್ನಲಾಗುತ್ತಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಈ ಬಾರಿ ಜೇಟ್ಲಿ ಮೋದಿ ಸಂಪುಟಕ್ಕೆ ಸೇರುವ ಸಾಧ್ಯತೆ ಇಲ್ಲ. ಜೇಟ್ಲಿ ಬೇಗ ಗುಣಮುಖರಾಗಲೆಂದು ಪ್ರಧಾನಿ ಮೋದಿ ಸೇರಿದಂತೆ ಹಿರಿಯ ನಾಯಕರೆಲ್ಲ ಪ್ರಾರ್ಥಿಸಿದ್ದಾರೆ.
ಗುರುವಾರವಷ್ಟೆ ದೆಹಲಿಯ ಏಮ್ಸ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಜೇಟ್ಲಿ ಅವರನ್ನು ಪುನಃ ಚಿಕಿತ್ಸೆಗೆ ಲಂಡನ್ ಗೆ ಕರೆದೊಯ್ಯಲಾಗಿದೆ ಎಂದು ಗೊತ್ತಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ