
ಪ್ರಗತಿವಾಹಿನಿ ಸುದ್ದಿ: ದೀಪಾವಳಿ ಹಬ್ಬದ ಹೊತ್ತಲ್ಲೇ ರಾಜ್ಯ ಸರ್ಕಾರ ಜನತೆಗೆ ಬಿಗ್ ಶಾಕ್ ನೀಡಿದೆ. ನಂದಿನಿ ಹಾಲಿನ ದರದಲ್ಲಿ ಭಾರಿ ಏರಿಕೆ ಮಾಡಿದೆ.
ಈ ಬಗ್ಗೆ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದಾರೆ. ನಂದಿನಿ ಹಾಲಿನ ದರದಲ್ಲಿ ಏರಿಕೆ ಮಾಡಲಾಗಿದ್ದು, ಒಂದು ಲೀಟರ್ ನಂದಿನಿ ಹಾಲಿನ ಮೇಲೆ 8 ರೂಪಾಯಿಯಂತೆ ದರ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದರು.
ನೂತನ ಪರಿಷ್ಕೃತ ದರ ನವೆಂಬರ್ 1ರಿಂದ ಜಾರಿಗೆ ಬರಲಿದೆ. ಪ್ರತಿ ಲೀಟರ್ ನಂದಿನಿ ಹಾಲಿಗೆ 8 ರೂಪಾಯಿ ಹೆಚ್ಚಿಸಲಾಗಿದ್ದು, ಹೆಚ್ಚಳ ಮಾಡಲಾದ 7 ರೂಪಾಯಿ ಹಾಲು ಉತ್ಪಾದಕರಿಗೆ ಹಾಗೂ 1 ರೂಪಾಯಿ ಕೆ ಎಂ ಎಫ್ ಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಹಾಲಿನ ದರ ಏರಿಕೆ ಬೆನ್ನಲ್ಲೇ ಹೋಟೆಲ್ ಗಳಲ್ಲಿ ಟೀ, ಕಾಫಿ ದರವೂ ಹೆಚ್ಚಳವಾಗುವ ಸಾಧ್ಯತೆ ಇದ್ದು, ಹಬ್ಬದ ಬಳಿಕ ಟೀ-ಕಾಫಿ ಗ್ರಾಹಕರ ಬಾಯಿ ಸುಡುವ ಸಾಧ್ಯತೆ ದಟ್ಟವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



