ಪ್ರಗತಿವಾಹಿನಿ ಸುದ್ದಿ, ಶಿರಸಿ:
ನರೇಂದ್ರ ಮೋದಿಯವರು ಹತಾಶರಾಗಿ ಪ್ರಗ್ಯಾ ಠಾಕೂರ್ ಗೆ ಲೋಕಸಭೆಗೆ ಟಿಕೆಟ್ ನೀಡಿದ್ದಾರೆ. ಇದರಿಂದ ಬಿಜೆಪಿ ಭಯೋತ್ಪಾದನೆಗೆ ಬೆಂಬಲ ನೀಡುತ್ತಿದೆ ಅನ್ನೋದು ಸಾಬೀತಾಗುತ್ತೆ. ಈ ಬೆಳವಣಿಗೆಯಿಂದ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಿ ಉಳಿಯಲು ಸಾಧ್ಯವಿಲ್ಲ. ಪೊಲೀಸರಿಗೆ ಅಪಮಾನ ಮಾಡುತ್ತಿರುವ ಭೋಪಾಲ್ ನ ಪ್ರಗ್ಯಾ ಠಾಕೂರನ್ನು ಬಂಧಿಸಬೇಕು ಹಾಗೂ ಲೋಕಸಭೆಗೆ ಅವರಿಗೆ ನೀಡಿರುವ ನಾಮಪತ್ರ ವಜಾ ಮಾಡಬೇಕು. ಪ್ರಧಾನಿ ಮೋದಿ ದೇಶದ ಜನರಲ್ಲಿ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಕಾಂಗ್ರೆಸ್ ರಾಷ್ಟ್ರೀಯ ಧುರೀಣ ಬಿ.ಕೆ.ಹರಿಪ್ರಸಾದ್ ಒತ್ತಾಯಿಸಿದರು. ಉತ್ತರಕನ್ನಡ ಜಿಲ್ಲೆ ಶಿರಸಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಭಯೋತ್ಪಾದಕರ ವಿರುದ್ಧ ಹೋರಾಟದಲ್ಲಿ ವೀರ ಮರಣ ಹೊಂದಿದ ಮಹಾರಾಷ್ಟ್ರ ಉಗ್ರ ನಿಗ್ರಹ ದಳದ ಮುಖ್ಯಸ್ಥರಾಗಿದ್ದ ಹೇಮಂತ ಕರ್ಕರೆ ಸಾವಿನ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ. ಹೀಗೆ ಪೊಲೀಸರ ಬಗ್ಗೆ ಅವಹೇಳನ ಮಾಡುತ್ತಿರುವ ಪ್ರಗ್ಯಾ ಠಾಕೂರ್ ವಿರುದ್ಧ ಭಯೋತ್ಪಾದನೆಯ ಆರೋಪಗಳಿದ್ದು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಆಕೆಯನ್ನು ನಿಷೇಧಿಸಬೇಕು. ಶಂಕಿತ ಭಯೋತ್ಪಾದಕಿಯಾಗಿರುವ ಆಕೆಯನ್ನು ಬಂಧಿಸಬೇಕು. ಜೊತೆಗೆ, ಆಕೆಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಕ್ಷಮೆಯಾಚಿಸಬೇಕು ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ